day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj 124 ಬಿಬಿಎಂಪಿ ಸದಸ್ಯರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಬೇಡ: ಆಮ್ ಆದ್ಮಿ ಪಕ್ಷದ ಆಗ್ರಹ avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

124 ಬಿಬಿಎಂಪಿ ಸದಸ್ಯರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಬೇಡ: ಆಮ್ ಆದ್ಮಿ ಪಕ್ಷದ ಆಗ್ರಹ avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಪತ್ರಿಕಾ ಪ್ರಕಟಣೆ

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ನಿರ್ಗಮಿತ 124 ಬಿಬಿಎಂಪಿ ಸದಸ್ಯರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಬೇಡ: ಆಮ್ ಆದ್ಮಿ ಪಕ್ಷದ ಆಗ್ರಹ

* ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಲು ನಿರ್ಧಾರ*

ಬೆಂಗಳೂರು ನವೆಂಬರ್‌ 17: ಲೋಕಾಯುಕ್ತರ ಆದೇಶಕ್ಕೂ ಬೆಲೆ ಕೊಡದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿರ್ಗಮಿತ 124 ಸದಸ್ಯರು ತಮ್ಮ ಆಸ್ತಿ ವಿವರ ಸಲ್ಲಿಸದೆ ದ್ರೋಹ ಎಸಗಿದ್ದು, ಇವರುಗಳಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ರ ಆಗಸ್ಟ್‌ 28ರಂದು ಆದೇಶ ಹೊರಡಿಸಿದ್ದ ಲೋಕಾಯುಕ್ತರು, 198 ವಾರ್ಡ್‌ಗಳ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಹೇಳಿದ್ದರು. ಈ ಆದೇಶ ನೀಡಿ ಒಂದು ವರ್ಷವಾದರೂ, 124 ಸದಸ್ಯರು ಇನ್ನೂ ತಮ್ಮ ವಿವರಗಳನ್ನು ಸಲ್ಲಿಸಿಲ್ಲ ಇಂತಹ ಸದಸ್ಯರುಗಳ ಹೆಚ್ಚುವರಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ ಅವರು ಮಾತನಾಡಿ, ವರ್ಷದಿಂದ ವರ್ಷಕ್ಕೆ ಎಗ್ಗಿಲ್ಲದೆ ಹೆಚ್ಚಳವಾಗುತ್ತಿದ್ದ ಜನಪ್ರತಿನಿಧಿಗಳ ಆಸ್ತಿ ಗಳಿಕೆಯ ಬಗ್ಗೆ ಸಾಕಷ್ಟು ಅನುಮಾನ ಮೂಡಿದ್ದರಿಂದ ಜನಪ್ರತಿನಿಧಿಗಳಾಗಿ ಆರಿಸಿ ಬಂದವರು, ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಬೇಕೆಂಬ ನಿಯಮ 2009 ರಲ್ಲೇ ಜಾರಿಗೆ ಬಂದಿತ್ತು. ಆದರೆ ಈಗ ಲೋಕಾಯುಕ್ತರ ಆದೇಶಕ್ಕೆ ಕನಿಷ್ಟ ಬೆಲೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಯ ಮುಖಾಂತರ ಜನಪ್ರತಿನಿಧಿಗಳಾಗಿ ಆರಿಸಿ ಬಂದವರು, ಪ್ರತಿ ವರ್ಷ ಜೂನ್‌ 30ರ ಒಳಗಾಗಿ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಬೇಕೆಂಬ ನಿಯಮ 2009ರಲ್ಲೇ ರೂಪಿತವಾಗಿತ್ತು. ಒಂದು ದಶಕದಷ್ಟು ಸಮಯ ಕಳೆದರೂ, ಈ ನಿಯಮವನ್ನು ಕಠಿಣವಾಗಿ ಜಾರಿಗೆ ಬರುವುದರಲ್ಲೇ ಇದೆ. ಕಾನೂನಿನ ಭಯವಿಲ್ಲದ, ಆಸ್ತಿ ವಿವರ ಸಲ್ಲಿಸದ 124 ನಿರ್ಗಮಿತ ಸದಸ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹಾಗೂ ಲೋಕಾಯುಕ್ತ ಸಂಸ್ಥೆಗೆ ಆಗ್ರಹಿಸಿದರು. ಆಸ್ತಿ ವಿವರ ಸಲ್ಲಿಸದ ನಿರ್ಗಮಿತ ಬಿಬಿಎಂಪಿ ಸದಸ್ಯರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ತಾಕತ್ತಿದೆಯೇ ಎಂದು ಇದೇ ಸಂಧರ್ಭದಲ್ಲಿ ಪ್ರಶ್ನಿಸಿದರು.

ಡಿಜೆ ಹಳ್ಳಿ ಗಲಬೆಯ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿರುವ ನಿರ್ಗಮಿತ ಮೇಯರ್‌ ಸಂಪತ್‌ ರಾಜ್‌, ಆಸ್ತಿ ವಿವರ ಸಲ್ಲಿಸಿಲ್ಲದ ನಿರ್ಗಮಿತ ಉಪ ಮೇಯರ್ ರಾಮ್ ಮೋಹನ್ ರಾಜು, ಪುಲಕೇಶಿ ನಗರದ ಅಬ್ದುಲ್ ರಕೀಬ್ ಜಾಕೀರ್ ಹುಸೇನ್, ವಿರೋಧ ಪಕ್ಷದ ನಾಯಕರಾಗಿದ್ದ ಮನೋರಾಯನ ಪಾಳ್ಯದ ಅಬ್ದುಲ್ ವಾಜಿದ್, ಹಿರಿಯೂರು ಬಿಜೆಪಿ ಶಾಸಕಿ ಕೆ.ಆರ್ ಪುರಂ ಪೂರ್ಣಿಮ, ಶಾಸಕ ಮುನಿರತ್ನ ಬೆಂಬಲಿಗ ಯಶವಂತಪುರದ ಜಿ.ಕೆ.ವೆಂಕಟೇಶ್, ಮಹಾಲಕ್ಷೀಪುರಂನ ಕೇಶವಮೂರ್ತಿ ಇವರ ಮಗ ಡ್ರಗ್ ಜಾಲದಲ್ಲಿದ್ದು ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ. ಇಷ್ಟೆಲ್ಲಾ ಸಮಾಜ ವಿರೋಧಿ ಕೆಲಸಗಳನ್ನು ಮಾಡುತ್ತಿರುವ ಇಂತಹ ಜನಪ್ರತಿನಿಧಿಗಳ ವಿರುದ್ದ ಕ್ರಮಗೊಳ್ಳಬೇಕು ಎಂದು ಲೋಕಾಯಕ್ತಕ್ಕೆ ದೂರು ನೀಡಲಾಗುವುದು ಎಂದರು.

About Author