AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 20 ವರ್ಷ ಸಜೆ

ತುಮಕೂರು: ಪ್ರೀತಿ, ಪ್ರೇಮದ ಹೆಸರಿನಲ್ಲಿ 14
ವರ್ಷದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ವೆಸಗಿದ್ದ ಅಪರಾಧಿ ಮಹೇಂದ್ರ ಕುಮಾರ್ ಗೆ ಪೋಕ್ಸ್‌ ನ್ಯಾಯಾಲಯ 20 ವರ್ಷ ಶಿಕ್ಷೆ, 1.30 ಲಕ್ಷ ರು. ದಂಡ ವಿಧಿಸಿದೆ. ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಮಹೇಂದ್ರ ಕುಮಾರ್ ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. 2022ರ ಸೆ. 1ರಂದು ಬಾಲಕಿಯನ್ನು ಪುಸಲಾಯಿಸಿ ತನ್ನೂರಿಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದನು. ಕಳ್ಳಂಬೆಳ್ಳ ಠಾಣೆಯ ಇನ್ ಸೆಕ್ಟರ್ ರವಿಕುಮಾರ್ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೋಕ್ಸ್‌ ನ್ಯಾಯಾಲಯದ ನ್ಯಾಯಾಧೀಶರು ಅ. 15ರಂದು ವಿಚಾರಣೆ ನಡೆಸಿದ್ದರು. ಅಪರಾಧಿಯ ವಿರುದ್ಧದ ಆರೋಪ ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಬುಧವಾರ ಪ್ರಕಟಿಸಿದ್ದಾರೆ. ಸಂತ್ರಸ್ತ ಬಾಲಕಿಗೆ 1.25 ಲಕ್ಷ ರು. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.

About Author

Leave a Reply

Your email address will not be published. Required fields are marked *