*ಏರಿಕೆ ಆಗಿದೆ ಶೇ. 15ರಷ್ಟು* *ಸಾರಿಗೆ ಬಸ್ ಟಿಕೆಟ್ ದರ*
1 min read*ಏರಿಕೆ ಆಗಿದೆ ಶೇ. 15ರಷ್ಟು*
*ಸಾರಿಗೆ ಬಸ್ ಟಿಕೆಟ್ ದರ*
ಕೆ.ಎಸ್. ಆರ್.ಟಿ.ಸಿ. ಸೇರಿದಂತೆ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಬಸ್ ಟಿಕೆಟ್ ದರವನ್ನು ಹೆಚ್ಚಿಸುವಂತೆ ನಾಲ್ಕು ಸಾರಿಗೆ ನಿಗಮಗಳು ಆಗಸ್ಟ್ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದವು. ಅದರ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆಯಲ್ಲಿ ಟಿಕೆಟ್ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.