ಹಿರಿಯ ಸಾಹಿತಿ ಡಾ. ನೋರ್ಬೆಟ್ ಡಿಸೋಜ (88)(ನಾ. ಡಿಸೋಜ) ಇನ್ನಿಲ್ಲ….
1 min readಹಿರಿಯ ಸಾಹಿತಿ ಡಾ. ನೋರ್ಬೆಟ್ ಡಿಸೋಜ (88)(ನಾ. ಡಿಸೋಜ) ಇನ್ನಿಲ್ಲ….
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ಸಾಹಿತಿ ಡಾ. ನೋರ್ಬೆಟ್ ಡಿಸೋಜ (ನಾ. ಡಿಸೋಜ) ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ 7.50ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು ಡಿಸೋಜ ಜನಿಸಿದರು. ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಅಲ್ಲದೆ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ ಮೂಡಿಬಂದಿವೆ. ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನ ಪಡೆದರೆ ‘ದ್ವೀಪ’ ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಗಳಿಸಿತ್ತು.
ಕರ್ನಾಟಕ ಸರ್ಕಾರ ಸೇರಿದಂತೆ. ನಾಡಿನ ಎಲ್ಲಾ ಕನ್ನಡಾಭಿಮಾನಿಗಳು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.