लाइव कैलेंडर

February 2025
M T W T F S S
 12
3456789
10111213141516
17181920212223
2425262728  
06/02/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿತ್ರ ಕಲಾವಿದರನ್ನು ಬೆಂಬಲಿಸಿ: ಸಿಎಂ ಸಿದ್ದು ಕರೆ

ಬೆಂಗಳೂರಿನಲ್ಲಿ 22ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂ | ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿ: ಸಿದ್ದು.

ಪ್ರತಿಯೊಂದು ಮನೆಯಲ್ಲೂ ಒಂದು ಕಲಾಕೃತಿ ಇದ್ದರೆ ಅದು ಮನೆಯ ಅಂದ ಚೆಂದ ಹೆಚ್ಚಿಸುತ್ತದೆ. ಬೆಂಬಲಿಸುವ ದೃಷ್ಟಿಯಿಂದಲೂಕಲಾಸಕ್ತರುಹೆಚ್ಚಿನ ಕಲಾಕೃತಿಯನ್ನು ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಚಿತ್ರಕಲಾ ಪರಿಷತ್ತು ಭಾನುವಾರ ಕುಮಾರ ಕೃಪಾ ರಸ್ತೆಯಲ್ಲಿ ಆಯೋಜಿಸಲಾಗಿದ್ದ 22 ನೇ ಚಿತ್ರ ಸಂತೆಯನ್ನು ಕಲಾಕೃತಿಯೊಂದರ ಮೇಲೆ ಸಹಿ ಹಾಕುವ ಮೂಲಕ ಮುಖ್ಯಮಂತ್ರಿ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿ, ಚಿತ್ರದ ಮೂಲಕ ಜನಜೀವನ, ಸಂಸ್ಕೃತಿ, ಪರಂಪರೆಯನ್ನು ಬಿಂಬಿ ಸಬಹುದಾಗಿದೆ. ಕಲಾವಿದರ ಶ್ರಮಕ್ಕೆ ಫಲಸಿಗ ಬೇಕೆಂದರೆ ಪ್ರತಿಯೊಬ್ಬರೂ ಕಲೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಜೊತೆಗೆ ತಮ್ಮ ಮನೆಗೆ ಒಂದಾದರೂ ಕಲಾಕೃತಿಯನ್ನು ಕೊಂಡೊಯ್ಯಬೇಕು. ಆಗ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು.

ನಾನು ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸಿದ್ದೇನೆ. ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ರಾಜ್ಯ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರ ಕಲಾ ಪರಿಷತ್ತು ಮಾಡುತ್ತಾ ಬರುತ್ತಿದೆ. ಜಗತ್ತಿನ ಯಾವ ಭಾಗದಲ್ಲೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಅನೇಕ ವರ್ಷಗಳಿಂದ ಚಿತ್ರಸಂತೆ ಯಶಸ್ವಿಯಾಗಿ ನಡೆಯುತ್ತಾ ಬರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅನೇಕ ಚಿತ್ರ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆ ಪ್ರದರ್ಶಿಸಲು ಹಾಗೂ ಕಲಾಸಕ್ತರಿಗೆ ಕಲಾಕೃತಿಗಳನ್ನು ಕೊಳ್ಳುವ ಅವಕಾಶವನ್ನೂ ಒದಗಿಸಲಾಗುತ್ತಿದೆಂದು ದಿನಕ್ಕೆ ಸಾವಿರ ಜನರ ಬೆಲೆ ಇದರಿಂದಲೇ ತಿಳಿಯಬಹುದು ಎಂದರು.

ಚಿತ್ರಸಂತೆ ಮಹಿಳೆಯರಿಗೆ ಸಮರ್ಪಿತ: ಒಬ್ಬ ಪುರುಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ. ಆದರೆ, ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಒಂದು ಕುಟುಂಬವೇ ಕಲಿತಂತೆ.
ಈ ಹಿನ್ನೆಲೆಯಲ್ಲಿ ಈ ಬಾರಿಯ ಚಿತ್ರಸಂತೆಯನ್ನು
ಹೆಣ್ಣುಮಕ್ಕಳಿಗೆ ಅರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರ ಕೆಲಸ ಮಾಡಿದ ಮಹಾತ್ಮಾ ಗಾಂಧೀಜಿ, ಅಂಬೇಡ್ಕರ್, ಸಾವಿತ್ರಿ ಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಚಿಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶಿಸಿರುವುದು ಶ್ಲಾಘನೀಯ ಎಂದರು.

ನಮ್ಮ ಸರ್ಕಾರ ಕೂಡ ಹೆಣ್ಣುಮಕ್ಕಳು ಶೋಷಣೆ, ತಾರತಮ್ಯ, ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಶಕ್ತಿ ಗೃಹಲಕ್ಷ್ಮಿಯಂತಹ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್. ಶಂಕರ್, ಸಂಸದ ಪಿ.ಸಿ.ಮೋಹನ್, ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.

₹1ನ 3000 ನಾಣ್ಯ ಬಳಸಿ ಮುರ್ಡೇಶ್ವರ ದೇವಾಲಯ

ಬೆಂಗಳೂರಿನ ಷಣ್ಮುಗಂ ಅವರು 1500 1 ಕಾಯಿನ್ ಬಳಸಿ ಕಾಶಿವಿಶ್ವನಾಥ ದೇವಾಲಯ, 3000 ಕಾಯಿನ್ ಬಳಸಿ ಮುರ್ಡೇಶ್ವರ.4000 ಕಾಯಿನ್ ಬಳಸಿ ಸೋಮೇಶ್ವರ ದೇವಾಲಯದ ಪ್ರತಿಕೃತಿ ರೂಪಿಸಿದ್ದು, ಕಲಾಪ್ರೇಮಿಗಳನ್ನು ಸೆಳೆಯಿತು.

ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಾಕೃತಿಯಯೊಂದರ ಮೇಲೆ ತಮ್ಮ ಸಹಿ ಮಾಡುವ ಮೂಲಕ 22ನೇ ಚಿತ್ರ ಸಂತೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕ‌ರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಸಂಸದ ಪಿ.ಸಿ.ಮೋಹನ್, ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *