ರಾಜ್ಯದ ಪ್ರತಿಷ್ಠಿತ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಚಿಕ್ಕಮಗಳೂರು ಎ. ಎನ್. ಮಹೇಶ್ ಅವರಿಗೆ ಲಭಿಸಿದೆ
1 min readರಾಜ್ಯದ ಪ್ರತಿಷ್ಠಿತ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಚಿಕ್ಕಮಗಳೂರು ಎ. ಎನ್. ಮಹೇಶ್ ಅವರಿಗೆ ಲಭಿಸಿದೆ
55 ವರ್ಷಗಳ ಇತಿಹಾಸವಿರುವ ಬೆಂಗಳೂರು ಪ್ರೆಸ್‌ಕ್ಲಬ್‌ಗೆ ದೇಶದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿಗಳು. ಹಲವಾರು ಮುಖ್ಯಮಂತ್ರಿಗಳು ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರು. ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಭೇಟಿ ನೀಡಿ ಕ್ಲಬ್‌ನ ಇತಿಹಾಸ ಮತ್ತು ಸಾಧನೆಯನ್ನು ಹಾಡಿ ಹೊಗಳಿದ್ದಾರೆ. ಅಷ್ಟೇ ಅಲ್ಲದೆ ಪ್ರೆಸ್‌ಕ್ಲಬ್ ಪ್ರತಿವರ್ಷ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದ್ದು, ಇದೀಗ ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿದೆ.
ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಭಾರತರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿತ ಡಾ.ಸಿ.ಎನ್.ಆರ್ ರಾವ್, ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಲೋಕಾಯುಕ್ತ ಎನ್. ವೆಂಕಟಾಚಲಯ್ಯ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್, ಪದ್ಮಶ್ರೀ ಪುರಸ್ಕೃತ ಡಾ. ಸಿ.ಎನ್. ಮಂಜುನಾಥ್, ಅಂತರರಾಷ್ಟ್ರೀಯ ಕ್ರಿಕೆಟ್ ಪಟು ಅನಿಲ್ ಕುಂಬ್ಳೆ, ಔಟ್‌ಲುಕ್ ಪತ್ರಿಕೆಯ ಸಂಪಾದಕ ಕೃಷ್ಣ ಪ್ರಸಾದ್, ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತೆ ಕುಮಾರಿ ಅಶ್ವಿನಿ ಅಕ್ಕುಂಜೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರ, ಸಾಮಾಜಿಕ ಹೋರಾಟಗಾರ, ಪರಿಸರವಾದಿ, ಸಮಾಜ ಪರಿವರ್ತನ ಸಮುದಾಯ ಸಂಸ್ಥೆಯ ಅಧ್ಯಕ್ಷರಾದ ಎಸ್.ಆರ್. ಹಿರೇಮಠ, ಇಸ್ರೋ ಅಧ್ಯಕ್ಷ ಡಾ.ಕೆ. ರಾಧಾಕೃಷ್ಣನ್, 2017ರ ಶತಮಾನದ ಶ್ರೀಗಳು ಕಾಯಕಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ, ಇನ್ಫೋಸಿಸ್ ಪ್ರತಿಷ್ಠಾನ ಅಧ್ಯಕ್ಷರಾದ ಶ್ರೀಮತಿ ಸುಧಾಮೂರ್ತಿ, ವಿಪ್ರೊ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅಜೀಂ ಪ್ರೇಮ್ ಜಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೆಂದ್ರ ಹೆಗ್ಗಡೆ, ಸೇರಿದಂತೆ ಅನೇಕ ಗಣ್ಯಾತಿಗಣ್ಯರಿಗೆ ಸಾಧಕರಿಗೆ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದೆ.
ಇದರ ಮತ್ತೊಂದು ಅಂಗವಾಗಿ ಈ ಬಾರಿ ರಾಜ್ಯಮಟ್ಟದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಲು ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಈ ಗೌರವಾನ್ವಿತ ಹಾಗೂ ಪ್ರತಿಷ್ಠಿತ ಪ್ರಶಸ್ತಿಗೆ ಚಿಕಮಗಳೂರು ಜಿಲ್ಲೆಯ ಎ ಎನ್ ಮಹೇಶ ಅವರನ್ನು ಆಯ್ಕೆ ಮಾಡಲಾಗಿದೆ
ಇದೇ ತಿಂಗಳ 11 ರ ಶನಿವಾರದಂದು ಸಂಜೆ 5.30 ಕ್ಕೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯುವ ವರ್ಣರಂಜಿತ ಹಾಗೂ ಸುಂದರ ಸಮಾರಂಭದಲ್ಲಿ ಸರ್ಕಾರದ ಅನೇಕ ಸಚಿವರು ಹಾಗೂ ಅತಿಥಿ ಗಣ್ಯರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಅಭಿನಂದಿಸಲಿದ್ದಾರೆ
ವರದಿ : ರಕ್ಷಿತ್ ಬಾಳೂರು