ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ. ಹಳಸೆ ಶಿವಣ್ಣ….
1 min readಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ.
ಹಳಸೆ ಶಿವಣ್ಣ….
ಮಲೆನಾಡಿನ ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಕಾಡಾನೆ ದಾಳಿಗೆ ಈಗಾಗಲೇ ಹಲವಾರು ರೈತ ಬೆಳೆಗಾರರು,ಕಾರ್ಮಿಕರು, ಸಾರ್ವಜನಿಕರು ಸಾವನಪ್ಪಿರುತ್ತಾರೆ. ಜೊತೆಗೆ ಅಪಾರ ಪ್ರಮಾಣದ ಬೆಳೆ,ಆಸ್ತಿಪಾಸ್ತಿ ಹಾನಿಯಾಗುತ್ತಿದೆ.
ಕಾಫಿ ಕಟಾವು ಮಾಡುವ ಈ ಸಂದರ್ಭದಲ್ಲಿ ಕಾರ್ಮಿಕರು ಪ್ರಾಣ ಭಯದಿಂದ ಕಾಫಿ ಕಟಾವಿಗೆ ಬರಲು ಭಯಪಡುತ್ತಿದ್ದಾರೆ.
ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಿಕೊಡುವಂತೆ ಕರ್ನಾಟಕ ಬೆಳೆಗಾರರ ಒಕ್ಕೂಟ ಹಿಂದಿನಿಂದಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೇ ಮನವಿ ಮಾಡುತ್ತಲೇ ಬಂದಿದ್ದು, ಈ ವರೆಗೆ ಯಾವುದೇ ಪರಿಹಾರ ದೊರಕಿಲ್ಲ.
ಇಂದು ಸಹ ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಹೋಬಳಿ ಹುಕ್ಕುಂದ ಗ್ರಾಮದ ಸಮೀಪ ಶ್ರೀ ನಾರಾಯಣ ಗೌಡ ಎಂಬುವವರು ಕಾಫಿಯನ್ನು ರಕ್ಷಣೆ ಮಾಡಿಕೊಳ್ಳಲು ಕಣದಲ್ಲಿ ಮಲಗಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ಮಲಗಿದವರನ್ನು ಆನೆಯ ಸೊಂಡಿಲಿನಿಂದ ಹುಲ್ಲಿನ ಮೇಲೆ ಎತ್ತಿ ಬಿಸಾಕಿದೆ .
ಶ್ರೀ ನಾರಾಯಣ ರವರು ಹುಲ್ಲಿನ ಮೇಲೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ಅವರಿಗೆ ತಲೆ ಮತ್ತು ಕಾಲುಗಳಿಗೆ ಪೆಟ್ಟು ಬಿದ್ದಿದ್ದರಿಂದ ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ ಕೂಡಲೇ ಅರಣ್ಯ ಇಲಾಖೆಯಿಂದ ಬಂದು ನಾರಾಯಣ ಗೌಡರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ.
ಕಾಡಾನೆ ಸಮಸ್ಯೆಯಿಂದ ಬೆಳೆಗಾರರು ಭಯಭೀತರಾಗಿದ್ದಾರೆ.
ಕಾಡಾನೆ ಸಮಸ್ಯೆಯಿಂದ ತೋಟದಲ್ಲಿ ಕೆಲಸ ಕಾರ್ಯಗಳು ಕುಂಠಿತಗೊಂಡು, ಹಾಗೂ ಬೆಳೆ ನಷ್ಟವಾಗಿ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ. ಜೊತೆಗೆ ಪ್ರಾಣ ಭಯದಿಂದ ಜೀವನ ಸಾಗಿಸುತ್ತಿದ್ದಾರೆ.
ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಹಾಗೂ
ಆಲ್ದೂರು ಹೋಬಳಿಯ ಹುಕ್ಕುಂದ ಗ್ರಾಮದಲ್ಲಿ ಇರುವ ಒಂಟಿ ಸಲಗವನ್ನು ಅರಣ್ಯ ಇಲಾಖೆಯವರು ಕೂಡಲೇ ಹಿಡಿದು ಈ ಪ್ರದೇಶದಿಂದ ಸ್ಥಳಾಂತರ ಮಾಡಬೇಕೆಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಈ ಮೂಲಕ ಆಗ್ರಹಿಸುತ್ತಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ನಾರಾಯಣ ಗೌಡ ಅವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇವೆ.
ಇಂತಿ
ಶ್ರೀ ಹೆಚ್. ಬಿ. ಶಿವಣ್ಣ
ಅಧ್ಯಕ್ಷರು
ಕರ್ನಾಟಕ ಬೆಳೆಗಾರರ ಒಕ್ಕೂಟ