ಇನ್ಮುಂದೆ ಈ ರಾಜ್ಯದಲ್ಲಿ ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಸಿಗಲ್ಲ!*
1 min read*ಇನ್ಮುಂದೆ ಈ ರಾಜ್ಯದಲ್ಲಿ ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಸಿಗಲ್ಲ!*
* ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ ಅಪಘಾತ ಸಂಖ್ಯೆಯನ್ನು ನಿಯಂತ್ರಿಸಲು ಮುಂದಾಗಿರುವ ಉತ್ತರ ಪ್ರದೇಶ ಸಾರಿಗೆ ಇಲಾಖೆ, ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇದರ ಭಾಗವಾಗಿ ಇನ್ನು ಮುಂದೆ ಉತ್ತರ ಪ್ರದೇಶದಲ್ಲಿ ಹೆಲ್ಮೆಟ್ ಧರಿಸದಿದ್ದರೆ, ಇಂಧನ ಸಿಗುವುದಿಲ್ಲ! ಸಾರಿಗೆ ಆಯುಕ್ತ ಬ್ರಜೇಶ್ ನರೇನ್ ಸಿಂಗ್ ಜನವರಿ 8 ರಂದು ಅಧಿಕೃತ ಪತ್ರವೊಂದನ್ನು ಹೊರಡಿಸಿದ್ದು, ‘ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡದಂತೆ’ ಪೆಟ್ರೋಲ್ ಬಂಕ್ ನಿರ್ವಾಹಕರಿಗೆ ನಿರ್ದೇಶನ ನೀಡಿದ್ದಾರೆ.
ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ ಅಪಘಾತ ಸಂಖ್ಯೆಯನ್ನು ನಿಯಂತ್ರಿಸಲು ಮುಂದಾಗಿರುವ ಉತ್ತರ ಪ್ರದೇಶ ರಾಜ್ಯದ ಸಾರಿಗೆ ಇಲಾಖೆ, ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇದರ ಭಾಗವಾಗಿ ಇನ್ನು ಮುಂದೆ ಉತ್ತರ ಪ್ರದೇಶದಲ್ಲಿ ಹೆಲ್ಮೆಟ್ ಧರಿಸದಿದ್ದರೆ, ಇಂಧನ ಸಿಗುವುದಿಲ್ಲ!
ದ್ವಿಚಕ್ರ ವಾಹನ ಅಪಘಾತಗಳಿಗೆ ಕಡಿವಾಣ ಹಾಕುವ ಸಲುವಾಗಿ ಉತ್ತರ ಪ್ರದೇಶ ಸಾರಿಗೆ ಇಲಾಖೆಯು ‘ಹೆಲ್ಮೆಟ್ ಇಲ್ಲದಿದ್ದರೆ ಇಂಧನ ಇಲ್ಲ’ (No helmet, no fuel) ನಿಯಮವನ್ನು ಅನುಷ್ಠಾನಕ್ಕೆ ತರುತ್ತಿದೆ. ಸಾರಿಗೆ ಆಯುಕ್ತ ಬ್ರಜೇಶ್ ನರೇನ್ ಸಿಂಗ್ ಜ.8 ರಂದು ಅಧಿಕೃತ ಪತ್ರವೊಂದನ್ನು ಹೊರಡಿಸಿದ್ದು, ‘ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡದಂತೆ’ ಪೆಟ್ರೋಲ್ ಬಂಕ್ ನಿರ್ವಾಹಕರಿಗೆ ನಿರ್ದೇಶನ ನೀಡಿದ್ದಾರೆ.
ಜನವರಿ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿನ ರಸ್ತೆ ಸುರಕ್ಷತಾ ಕ್ರಮಗಳ ಪರಿಶೀಲನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ರಸ್ತೆ ಅಪಘಾತಗಳಿಂದ ರಾಜ್ಯದಲ್ಲಿ ವಾರ್ಷಿಕ 26 ಸಾವಿರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ನಿಯಮ ಜಾರಿಯಾಗುತ್ತಿದೆ. ಕ್ಯೂಟ್ ಕೂರ್ಗ್ ನ್ಯೂಸ್. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ದ್ವಿಚಕ್ರ ವಾಹನಗಳ ಅಪಘಾತ ಹೆಚ್ಚುತ್ತಿದೆ. ಬಹುತೇಕ ಅಪಘಾತಗಳಲ್ಲಿ ಸವಾರರು ಹೆಲ್ಮೆಟ್ ಧರಿಸಿರುವುದಿಲ್ಲ. ಇದರಿಂದ ಸಾವು – ನೋವುಗಳಾಗುತ್ತಿವೆ. ಈ ಹಿನ್ನೆಲೆ ‘ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡದಂತೆ’ ಸೂಚನೆ ಹೊರಡಿಸಲಾಗಿದೆ. ಉತ್ತರ ಪ್ರದೇಶದ 75 ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಹಾಗೂ ವಿಭಾಗೀಯ ಆಯುಕ್ತರಿಗೆ ಆದೇಶವನ್ನು ಕಳುಹಿಸಲಾಗಿದೆ.
‘ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೇ ಇರುವುದು ಕಂಡು ಬಂದಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ವಾಹನ ಸವಾರರ ಜೀವ ಉಳಿಸುವ ಹಾಗೂ ರಾಜ್ಯದಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದೇವೆ. ಈ ನಿಯಮಯವನ್ನು 2019ರಲ್ಲಿ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಪರಿಚಯಿಸಲಾಗಿತ್ತು. ಆದರೆ ಸರಿಯಾಗಿ ಅನುಷ್ಠಾನ ಆಗಿರಲಿಲ್ಲ. ಇದೀಗ ಮತ್ತೆ ಪರಿಷ್ಕೃತ ನಿಯಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಈ ನಿಯಮವು ವಾಹನ ಸವಾರರಲ್ಲಿ ಜವಾಬ್ದಾರಿಯ ಪ್ರಜ್ಞೆಯನ್ನು ಮೂಡಿಸಲು ಮತ್ತು ಸುರಕ್ಷಿತ ಪ್ರಯಾಣದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ’ ಎಂದು ಸಾರಿಗೆ ಆಯುಕ್ತ ಬ್ರಜೇಶ್ ನರೇನ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದ್ವಿಚಕ್ರ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಪೆಟ್ರೋಲ್ ಬಂಕ್‌ಗಳಲ್ಲಿ ‘NO HELMET, NO FUEL ‘ ಬೋರ್ಡ್‌ಗಳನ್ನು ಅಳವಡಿಸಬೇಕು. ಇಲಾಖೆ ವತಿಯಿಂದ ಸಾಮಾಜಿಕ ಜಾಲತಾಣ ಸೇರಿ ವಿವಿಧ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.