ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ- ನಗರದಲ್ಲಿ ವಿದ್ಯಾರ್ಥಿಗಳಿಂದ ಜಾಥಾ
1 min readರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ- ನಗರದಲ್ಲಿ ವಿದ್ಯಾರ್ಥಿಗಳಿಂದ ಜಾಥಾ
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2025 ಅಂಗವಾಗಿ ಸಾರ್ವಜನಿಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಪೊಲೀಸ್ ವತಿಯಿಂದ ಸೈಟ್ಸ್ ಮತ್ತು ಗೈಡ್ಸ್ ಮತ್ತು ರೋಟರಿ ಸಂಸ್ಥೆ ಸಹಯೋಗದೊಂದಿಗೆ ಚಿಕ್ಕಮಗಳೂರು ನಗರದಲ್ಲಿ ಇಂದು ಜಾಗೃತಿ ಜಾಥಾವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅಪಘಾತ ತಡೆಯಲು ಸಂಚಾರಿ ನಿಯಮಗಳ ಪಾಲನೆ ಅತ್ಯಗತ್ಯ ಎಂದು ಹೇಳಿದರು.
ಕೇವಲ ದಂಡ ವಿಧಿಸುವುದರಿಂದ, ಪೋಲೀಸರನ್ನು ನಿಯೋಜಿಸುವುದರಿಂದ ಅಪಘಾತಗಳನ್ನು ತಡೆಯಲು ಸಾಧ್ಯವಿಲ್ಲ. ಸಂಚಾರಿ ನಿಯಮಗಳ ಪಾಲನೆಯ – ಬಗ್ಗೆ ಜಾಗೃತಿ ಮೂಡಿಸುವ ಮೂಲಕ ತಡೆಯಬಹುದಾಗಿದೆ ಎಂದರು.
ವಿದ್ಯಾರ್ಥಿ ದೆಸೆಯಿಂದಲೇ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದರಿಂದ ಮುಂದೆ ಆಗಬಹುದಾದ ಅವಘಡಗಳಿಂದ ರಕ್ಷಣೆ ಪಡೆಯಬಹುದು ಎಂದು ಹೇಳಿದ ಅವರು ವಿದ್ಯಾರ್ಥಿಗಳು ತಾವು ದೊಡ್ಡವರಾದ ನಂತರ ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಹೆಲೈಟ್ ಧರಿಸುವುದು – ವಾಹನಗಳನ್ನು ಓಡಿಸುವಾಗ ಬೆಲ್ಟ್ ಧರಿಸುವುದು ಕಡ್ಡಾಯ. ಅತಿ ವೇಗದ ಚಾಲನೆ ಮಾಡದಿರುವುದು ಈ ಬಗ್ಗೆ – ಎಚ್ಚರವಹಿಸಬೇಕೆಂದರು.
ತಮ್ಮ ಹಿರಿಯರಿಗೂ ಸಂಚಾರಿನಿಯಮಗಳನ್ನು ಪಾಲಿಸುವಂತೆ ಮಾಹಿತಿ ನೀಡಬೇಕು ಎಂದು ಹೇಳಿದರು 2024ನೇ ಸಾಲಿನಲ್ಲಿ ಸಂಚಾರ ವಾಹನ ಅಪಘಾತಗಳಿಂದ 236 ಮಂದಿ ಸಾವನ್ನಪ್ಪಿದ್ದಾರೆ ಸಾವಿನ ಸಂಖ್ಯೆಯನ್ನು ಇನ್ನಷ್ಟು ಕಡಿತಗೊಳಿಸಲು ಸಂಚಾರಿ ನಿಯಮಗಳ ಬಗ್ಗೆ ಹೆಚ್ಚು ಹೆಚ್ಚು ಜನಜಾಗೃತಿ ಮೂಡಿಸಬೇಕಿದೆ ಆ ಕೆಲಸವನ್ನು ಪೊಲೀಸ ಇಲಾಖೆ ಮಾಡುತ್ತಿದೆ ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು ವಿಕ್ರಮ್ ಅಮಟೆ ತಾಲ್ಲೂಕ್ ಕಛೇರಿಯಿಂದ ಜಾಗೃತಿ ಜಾಥಕ್ಕೆ ಚಾಲನೆ ನೀಡಿದರು. ಜಾಥಾದಲ್ಲಿ ಕೃಷ್ಣಮೂರ್ತಿ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶೈಲೇಂದ್ರ ಹೆಚ್ ಎಂ, ಡಿವೈಎಸ್ಪಿ. ಮತ್ತು ಷಡಾಕ್ಷರಿ..ಎ ಎನ್ ಮಹೇಶ್, ಭಾರತ್ ಸೌಟ್ಸ್ ಮತ್ತು ಗೈಡ್ಸ್, ಸುಜಿತ್, ರೋಟರಿ ಕ್ಲಬ್‌ರವರು ಭಾಗವಹಿಸಿದ್ದರು.