ಜಿಲ್ಲಾ ವಕ್ಕಲಿಗರ ಸಂಘಕ್ಕೆ ಟಿ.ರಾಜಶೇಕರ್ ಪುನರಾಯ್ಕೆ.
1 min readಜಿಲ್ಲಾ ವಕ್ಕಲಿಗರ ಸಂಘಕ್ಕೆ ಟಿ.ರಾಜಶೇಕರ್ ಪುನರಾಯ್ಕೆ.
ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಟಿ.ರಾಜಶೇಕರ್, ಉಪಾಧ್ಯಕ್ಷರಾಗಿ ಟಿ.ಡಿ.ಮಲ್ಲೇಶ್ ಗೌರವ ಕಾರ್ಯದರ್ಶಿಯಾಗಿ ಎಂ.ಎಸ್ ಪ್ರದೀಪ್‌ಕುಮಾರ್ ಆಯ್ಕೆಯಾಗಿದ್ದಾರೆ.
ಇಂದು ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಮೇಲ್ಕಂಡವರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ್ ಘೋಷಿಸಿದರು. ನಂತರ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಟಿ.ರಾಜಶೇಖರ್ ಸಮಾಜದ ಹಿರಿಯರು ಸ್ಥಾಪಿಸಿದ ಒಕ್ಕಲಿಗರ ಸಂಘದ ಅಭಿವೃದ್ಧಿಗೆ ಇಂದು ಆಯ್ಕೆಯಾದ ನಿರ್ದೇಶಕರು, ಪದಾಧಿಕಾರಿಗಳು ಶ್ರಮಿಸಬೇಕೆಂದು ಕರೆ ನೀಡಿದರು.
ಕಳೆದ ಮೂರು ವರ್ಷದ ಅವಧಿಯಲ್ಲಿ ಸಾಧಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಮೌಲ್ಯಮಾಪನ ಮಾಡಿ ನಿರ್ದೇಶಕರುಗಳು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ, ಜನಾಂಗದ ಮತ್ತು ಹಿರಿಯರ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು.
ಮುಂದಿನ ಮೂರು ವರ್ಷಗಳ ಅವಧಿಗೆ ಮತ್ತೊಮ್ಮೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಈ ಅವಧಿಯಲ್ಲಿ ಸಮಾಜದ ಮತ್ತು ಸಂಘಟನೆಗೆ ಒತ್ತುನೀಡಿ ಕೆಲಸ ಮಾಡಲು ಬದ್ಧವಾಗಿದ್ದೇವೆ, ಆಯ್ಕೆ ಮಾಡಿರುವ ನಿರ್ದೇಶಕರು ಹಾಗೂ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸಿದರು.