AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ತಾಯಿ ಮತ್ತು ಚಿಕ್ಕಮಕ್ಕಳ 100ಹಾಸಿಗೆ ಸರ್ಕಾರಿ ಆಸ್ಪತ್ರೆಯಕಾಮಗಾರಿಗೆ ಇಂದು ಭೂಮಿಪೂಜಾ ಕಾರ್ಯಕ್ರಮ .#avintvcom

1 min read
Featured Video Play Icon

ತಾಯಿ ಮತ್ತು ಚಿಕ್ಕಮಕ್ಕಳ 100ಹಾಸಿಗೆ ಸಾಮಥ್ರ್ಯದ ಸುಸಜ್ಜಿತ ಅತ್ಯಾಧುನಿಕ ಸರ್ಕಾರಿ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಇಂದು ಭೂಮಿಪೂಜಾ ಕಾರ್ಯಕ್ರಮ .
ಆ್ಯಂಕರ:
ಜಮಖಂಡಿ ನಗರದ ಈ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾದ ತಾಯಿ ಮತ್ತು ಚಿಕ್ಕಮಕ್ಕಳ 100ಹಾಸಿಗೆ ಸಾಮಥ್ರ್ಯದ ಸುಸಜ್ಜಿತ ಅತ್ಯಾಧುನಿಕ ಸರ್ಕಾರಿ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಇಂದು ಜಮಖಂಡಿ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಭೂಮಿಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಸುಮಾರು ರೂ.20.05 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸರ್ಕಾರಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ರಾಷ್ಟೀಯ ಆರೋಗ್ಯ ಅಭಿಯಾನ (NHM) ಯೋಜನೆ ಅಡಿಯಲ್ಲಿ 2018-19ನೇ ಸಾಲಿನಲ್ಲಿ
ಅನುಮೋದನೆಯಾಗಿದೆ.
ಭೂಮಿಪೂಜಾ ಸಮಾರಂಭದಲ್ಲಿ ಪಾಲ್ಗೊಂಡ ಶ್ರೀ ಗೋವಿಂದ ಕಾರಜೋಳ, (ಮಾನ್ಯ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಬಾಗಲಕೋಟ), ಶ್ರೀ ಸಿದ್ದು ಸವದಿ (ಶಾಸಕರು ತೇರದಾಳ ಮತಕ್ಷೇತ್ರ) ರವರು, ಜಿ ಎಸ್ ನ್ಯಾಮಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಸಿದ್ದು ಮೀಸಿ ನಗರಸಭೆ ಅಧ್ಯಕ್ಷರು ಸವಿತಾ ಕಲ್ಯಾಣಿ, ತಾಲೂಕ ಪಂಚಾಯತ್ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದರು ಹಾಗೂ ಪೂಜ್ಯರಾದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯರು ಮುತ್ತಿನ ಕಂತಿ ಹಿರೇಮಠ ಜಮಖಂಡಿ, ಜಿಲ್ಲಾ ಹಾಗೂ ತಾಲೂಕಾಡಳಿತ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇತರೆ ಇಲಾಖೆಗಳ ಎಲ್ಲ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಎಲ್ಲ ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಘನ್ಯಮಾನ್ಯರು, ಮುಖಂಡರುಗಳು, ಕಾರ್ಯಕರ್ತರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ ಪರಶುರಾಮ್. ಕಾಂಬಳೆ

About Author