ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ದೇವರಾಜ್ ಶೆಟ್ಟಿ ಮರು ಆಯ್ಕೆ
1 min readಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ
ದೇವರಾಜ್ ಶೆಟ್ಟಿ ಮರು ಆಯ್ಕೆ
ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ದೇವರಾಜ್ ಶೆಟ್ಟಿ ಅವರು ಮರು ಆಯ್ಕೆಗೊಂಡಿದ್ದಾರೆ.
ಚಿಕ್ಕಮಗಳೂರಿನ ಬಿಜೆಪಿ ಪಕ್ಷದ ಕಛೇರಿಯಾದ ಪಾಂಚಜನ್ಯದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳ ಹಾಗೂ ಹಿರಿಯರ ಅಭಿಪ್ರಾಯದಂತೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಮಗದೊಮ್ಮೆ ನಿಯುಕ್ತಿಗೊಂಡಿ ದ್ದಾರೆ ಎಂದು ಬಿಜೆಪಿ ಜಿಲ್ಲಾ ಚುನಾವಣಾಧಿಕಾರಿ ಡಾ. ಚೇತನ್ ಕುಮಾರ್ ಘೋಷಣೆ ಮಾಡಿದರು.
ಈ ವೇಳೆ ಮಾಜಿ ಸಚಿವ ಡಿ. ಎನ್ ಜೀವರಾಜ್, ಮಾಜಿ ಮಂತ್ರಿ.ಎನ್.ಮಹೇಶ್.ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಡಿ. ಎಸ್ ಸುರೇಶ್, ದೀಪಕ್ ದೊಡ್ಡಯ್ಯ, ಕಾಫಿ ಮಂಡಳಿ ಅಧ್ಯಕ್ಷರಾದ ಎಂ ಜೆ ದಿನೇಶ್ ದೇವವೃಂದ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.