ರಸ್ತೆ ಅಗಲಿಕರಣಕ್ಕೆ.ಪೆಬ್ರವರಿ.14.ಕೊನೆ ಗಡುವು..
1 min read![](https://avintv.com/wp-content/uploads/2025/02/IMG_20250208_174719-1024x311.jpg)
ರಸ್ತೆ ಅಗಲಿಕರಣಕ್ಕೆ.ಪೆಬ್ರವರಿ.14.ಕೊನೆ ಗಡುವು..
ಚಿಕ್ಕಮಗಳೂರು ತಾಲೂಕಿನ
ಮೂಗ್ತಿಹಳ್ಳಿಯಿಂದ ಮೂಡಿಗೆರೆ ಹ್ಯಾಂಡ್ ಪೋಸ್ಟ್ ವರೆಗೆ ರಸ್ತೆ ಅಗಲೀಕರಣ ಮಾಡಲು ಹೈವೆ ಪ್ರಾಧಿಕಾರದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆಂದು ರೈತ ಸಂಘದ ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ ಗೌಡ ದೂರಿದರು.
ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾ-ರಿಗಳ ರಸ್ತೆ ಅಗಲೀಕರಣವಾಗಿದೆ. ಆದರೆ ಮೂಡಿಗೆರೆ ತಾಲೂಕಿನಲ್ಲಿ ಮಾತ್ರ ಇದೂವರೆಗೂ ಸಾಧ್ಯವಾಗಿಲ್ಲ. ಹಾಗಾಗಿ ಇನ್ನು ಒಂದು ವಾರದಲ್ಲಿ ರಸ್ತೆ ಅಗಲೀಕರಣಕ್ಕೆ ಚಾಲನೆ ನೀಡಬೇಕು. ವಿಳಂಬ ನೀತಿ ಅನುಸರಿಸಿದರೆ ಎಲ್ಲಾ ಪ್ರಗತಿಪರ ಸಂಘಟನೆಯೊಂದಿಗೆ ಫೆ.14ರಂದು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ರೈತ ಸಂಘದ ಡಿ.ಆರ್.ಪುಟ್ಟಸ್ವಾಮಿಗೌಡ ತಾಲೂಕು ಅಧ್ಯಕ್ಷ ಮಾತನಾಡಿ, ತಾಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳೆ ನಡೆಯುತ್ತಿಲ್ಲ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮರಿಚಿಕೆಯಾಗಿದೆ. ಅಧಿಕಾರಿಗಳಿಗೆ ಒತ್ತಡ ತಂದು ಕೆಲಸ ಮಾಡಿಸಬೇಕಾದ ಜನಪ್ರತಿನಿಧಿಗಳು ಚಕಾರ ಎತ್ತುತ್ತಿಲ್ಲ. ಹಾಗಾಗಿ ಫೆ.14ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ಎಲ್ಲಾ ಪ್ರಗತಿಪರ ಸಂಘಟನೆಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.
ರೈತ ಸಂಘದ ಕಾರ್ಯದರ್ಶಿ ಚಂದ್ರೇಗೌಡ. ಮೂಡಿಗೆರೆ.ಕಸಾಪ ಅಧ್ಯಕ್ಷ ಲಕ್ಷ್ಮಣ್‌ಗೌಡ.ಡಿ.ಕೆ.ಮೂಡಿಗೆರೆ.ತಾ:ಕರವೇ ಅಧ್ಯಕ್ಷ ವಿನೋದ್ ಕುಮಾರ್ ಉಪಸ್ಥಿತರಿದ್ದರು.