ಗ್ರಾಮದ ಜನರ ಕಷ್ಟಕ್ಕೆ ಸ್ಪಂದಿಸುವ ಗ್ರಾಮ ಆಡಳಿತ ಅಧಿಕಾರಿಗಳ ಕಷ್ಟಕ್ಕೆ ಸ್ಪಂದಿಸುವವರಾರು…??…ಇವರ ನೋವಿಗೆ ಕೊನೆ ಯಾವಾಗ…??…*
1 min read![](https://avintv.com/wp-content/uploads/2025/02/IMG-20250210-WA0088.jpg)
*ಗ್ರಾಮದ ಜನರ ಕಷ್ಟಕ್ಕೆ ಸ್ಪಂದಿಸುವ ಗ್ರಾಮ ಆಡಳಿತ ಅಧಿಕಾರಿಗಳ ಕಷ್ಟಕ್ಕೆ ಸ್ಪಂದಿಸುವವರಾರು…??…ಇವರ ನೋವಿಗೆ ಕೊನೆ ಯಾವಾಗ…??…*
ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ) ಇದರ ತಾಲ್ಲೂಕು ಘಟಕದ ವತಿಯಿಂದ ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ ಮುಷ್ಕರ ದಿನಾಂಕ 10/02/2025ರ ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯ,ಬೆಳ್ತಂಗಡಿ ತಾಲ್ಲೂಕು ಕಚೇರಿಯ ಆವರಣದಲ್ಲಿ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಘಟಕದ ಅಧ್ಯಕ್ಷರಾದ ಪ್ರದೀಪ್ ಕುಮಾರ್.ಸಿ. ಮಾತನಾಡಿ,ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳಾದ ಸಾರ್ವಜನಿಕರಿಗೆ ನೇರವಾಗಿ ಸೇವೆ ನೀಡಲು ಒಂದು ಕಚೇರಿ,ಮಹಿಳಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುರಕ್ಷತಾ ಸೌಲಭ್ಯಗಳು,ಗ್ರಾಮ ಆಡಳಿತ ಅಧಿಕಾರಿಗಳ ವರ್ಗಾವಣೆ,ಗ್ರಾಮ ಆಡಳಿತ ಅಧಿಕಾರಿಗಳ ಬಡ್ತಿ,ಕಾನೂನಿನ ರಕ್ಷಣೆ ನೀಡುವಂತೆ,ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಶೋಷಣೆಗಳು ತಡೆಯುವಂತೆ ಮತ್ತು ಕಂದಾಯ ಇಲಾಖೆಯ ಆಧಾರಸ್ತಂಭಗಳಿಗೆ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನದಟ್ಟು ಮಾಡಲು ನಾವು ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದೇವೆ. ಇದರಿಂದ ನಮ್ಮ ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಲ್ಲೂಕು ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ) ಈದರ ಉಪಾಧ್ಯಕ್ಷರಾದ ಉಷಾ ಕಿರಣ್ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.