ರಸವಾರ್ತೆ, ರಸಪ್ರಶ್ನೆ ಎಂದರೆ ಏನೋ ಒಂದು ರೀತಿಯ ಕುತೂಹಲ ಕೌತುಕ ಇದರೊಳಗೆ ಇರುತ್ತದೆ.
1 min read![](https://avintv.com/wp-content/uploads/2025/02/IMG-20250212-WA0043-1024x1024.jpg)
ರಸವಾರ್ತೆ, ರಸಪ್ರಶ್ನೆ ಎಂದರೆ ಏನೋ ಒಂದು ರೀತಿಯ ಕುತೂಹಲ ಕೌತುಕ ಇದರೊಳಗೆ ಇರುತ್ತದೆ.
ಇಂತಹ ಕೌತುಕ,ಕುತೂಹಲ ಮತ್ತು ಆಸಕ್ತಿ ಬಾಲ್ಯದಲ್ಲಿ ಅತೀ ಹೆಚ್ಚಾಗಿರುತ್ತದೆ ಅನ್ನಬಹುದು, ಇಂತಹ ಕುತೂಹಲ ಮತ್ತು ವಿಷಯದ ಮೇಲೆ ಆಸಕ್ತಿಯನ್ನು ವಿದ್ಯಾರ್ಥಿಗಳಿಗೆ ಕಟ್ಟಿಕೊಡುವ ದೃಷ್ಟಿಯಿಂದ, ವೈಚಾರಿಕತೆ ಮತ್ತು ವೈಜ್ಞಾನಿಕತೆ ಕಡೆಗೆ ಚಿಂತಿಸುವ ನಿಟ್ಟಿನಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಇಂದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ನೋಬೆಲ್ ಪಾರಿತೋಷಕ ಪ್ರಶಸ್ತಿ ವಿಜೇತ ವಿಜ್ಞಾನಿ ಸರ್. ಸಿ. ವಿ ರಾಮನ್ ಅವರ ಜನ್ಮದಿನಾಚರಣೆಯನ್ನು ಪ್ರತಿ ವರ್ಷ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಾ ಬರುತ್ತಿದೆ.
ಈ ಸಂಬಂಧ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕವು ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಿತ್ತು.
ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಲ್ಲದೆ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಂದು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು.
ಕೆಜೆವಿಎಸ್ ಹಮ್ಮಿಕೊಂಡಿದ್ದ ಈ ರಸಪ್ರಶ್ನೆ ಸ್ಪರ್ಧೆಯನ್ನು ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಪ್ರಾಂಶುಪಾಲರಾದ ಧನರಾಜ್ ಜಿ ಅವರು ಸ್ಪರ್ಧೆಗೆ ಭಾಗವಹಿಸಿದ ಮಕ್ಕಳಿಗೆ ಶುಭಕೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಣಿತ ಶಿಕ್ಷಕ ಅಶೋಕ್ ಬಿ.ಜೆ. ಕನ್ನಡ ಶಿಕ್ಷಕ ಎಸ್. ಜಿ. ಕಲ್ಲೇಶಪ್ಪ ಮತ್ತು ವಿಜ್ಞಾನ ಶಿಕ್ಷಕ ಜಯವರ್ಧನ್ ಆರ್ ದೋತ್ರೆ ಅವರು ಸ್ಪರ್ಧೆಯನ್ನು ಅತ್ಯಂತ ಅಚ್ಚುಕಟ್ಟಾಗಿ ರೂಪಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಅತ್ಯಂತ ಸಡಗರ ಸಂಭ್ರಮದಿಂದ ನಾ ಮುಂದೆ ತಾ ಮುಂದೆ ಎಂಬಂತೆ ಈ ಸ್ಪರ್ಧೆಯಲ್ಲಿ ಭಾಗವಹಿಸಿದರು. ಕೆಜೆವಿಎಸ್ ಜಿಲ್ಲಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಮತ್ತು ಜಿಲ್ಲಾ ಘಟಕವು ಈ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿಕೊಟ್ಟ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ಎಲ್ಲ ಶಿಕ್ಷಕ ಸಮೂಹಕ್ಕೆ. ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಈ ಮೂಲಕ ಅಭಿನಂದನೆಯನ್ನು ಸಲ್ಲಿಸಿದೆ.
••••••••••••••••••✒️ವರದಿ
ಡಿ. ಎಂ. ಮಂಜುನಾಥಸ್ವಾಮಿ