ವಚನ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ನೇಮಕ
1 min read![](https://avintv.com/wp-content/uploads/2025/02/IMG_20250213_223529.jpg)
ವಚನ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ನೇಮಕ
ಚಿಕ್ಕಮಗಳೂರು: ಜಿಲ್ಲಾ ವಚನ ಸಾಹಿತ್ಯ ಪರಿಷತ್ತು ಅದ್ಯಕ್ಷರಾಗಿ ಸಿಂಗಟಗೆರೆ ಸಿದ್ದಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ವಚನ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.
ನೂತನ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ ಮಾತನಾಡಿ, ವಚನ ಸಾಹಿತ್ಯವನ್ನು ಜಿಲ್ಲೆಯಲ್ಲಿ ಪಸರಿಸುವ ಮೂಲಕ ಶರಣ ಸಾಹಿತ್ಯ ಸಂಸ್ಕೃತಿಯನ್ನು ಬಿಂಬಿಸಲಾಗುವುದು, ಎರಡು ವಚನ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗಿದ್ದು ಮುಂದಿನ ದಿನಗಳಲ್ಲಿ ತಾಲೂಕು ಮತ್ತು ರಾಜ್ಯ ಮಟ್ಟದಲ್ಲೂ ಕೂಡ ವಚನ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದಿದ್ದಾರೆ.