ಮುದ್ರೆಮನೆ ಕಾಫಿ ಕ್ಯೂರಿಂಗ್ ನಲ್ಲಿ ಆಕಸ್ಮಿಕ ಬೆಂಕಿ
1 min read
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣ ಹೊರವಲಯದ ಮುದ್ರೆಮನೆ ಕಾಫಿ ಕ್ಯೂರಿಂಗ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಪ
ರಿಣಾಮ ಅಪಾರ ಪ್ರಮಾಣದ ಕಾಫಿ ಹೊಟ್ಟು ನಾಶಗೊಂಡಿದೆ.
ಕಾಫಿ ಹಲ್ಲರ್ ಮಾಡಿದ ಬಳಿಕ ಉಳಿದ ಹೊಟ್ಟನ್ನು ಗೊದಾಮಿನಲ್ಲಿ ಸಂಗ್ರಹಿಸಿಲಾಗಿತ್ತು.ಈ ಗೋದಾಮಿನಲ್ಲಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತಿದ್ದಂತೆ ಮೂಡಿಗೆರೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಆದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ..
ಹೀಗಾಗಿ ಚಿಕ್ಕಮಗಳೂರು ಹಾಗೂ ಬೇಲೂರಿನಿಂದ ಹೆಚ್ಚುವರಿ ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಸಮಯಕ್ಕೆ ಸರಿಯಾಗಿ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿರುವುದರಿಂದ ದೊಡ್ಡ ಅನಾಹುತವೊಂದು ತಪ್ಪಿದ್ದು, ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.