लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…..

1 min read

ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ಅಜಾದ್ ನಗರ ವಾಸಿಸುತಿದ್ದ ದಲಿತ ವಿವಾಹಿತ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನಾಂಕ 12.04.2025 ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. , ದಿನಾಂಕ 13.04.2025 ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.

ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಐಪಿಸಿ ಕಲಂಗಳು 329(4), 74, 75, 115(2), 352, 351(2)(3) ಹಾಗೂ ಎಸ್‌ಸಿ/ಎಸ್‌ಟಿ (ಅತ್ಯಾಚಾರ ನಿರೋಧಕ) ಕಾಯ್ದೆಯ 3(1)(w), 3(2)(va) ರ ಅಂಗವಾಗಿ ಬಣಕಲ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 0026/2025ರಂತೆ ಪ್ರಕರಣ ದಾಖಲಿಸಲಾಗಿದೆ.

About Author

Leave a Reply

Your email address will not be published. Required fields are marked *