लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಪತ್ನಿಯಿಂದ ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ*
*ಓಂ ಪ್ರಕಾಶ್ ಕೊಲೆ?*

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ & ಐಜಿಪಿಯಾಗಿದ್ದರು.

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹೆಂಡತಿಯೇ ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಓಂ ಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ಜಾನ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರು 2015ರ ಮಾರ್ಚ್ 01 ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಆಗಿ ಅಧಿಕಾರ ವಹಿಸಿಕೊಂಡಿದ್ದರು. 1981 ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್, 38ನೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಓಂ ಪ್ರಕಾಶ್ ಬಿಹಾರದ ಚಂಪಾರಣ ಜಿಲ್ಲೆಯವರು. ಬಳ್ಳಾರಿಯ ಹರಪನಹಳ್ಳಿ ಉಪವಿಭಾಗದ ಎಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ನಂತರ, ರಾಜ್ಯ ಜಾಗೃತ ಆಯೋಗ ಮತ್ತು ಕರ್ನಾಟಕ ಲೋಕಾಯುಕ್ತ ಎಸ್ಪಿಯಾಗಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಸ್ಪಿಯಾಗಿ ಬಡ್ತಿ ಪಡೆದ್ದರು.

About Author

Leave a Reply

Your email address will not be published. Required fields are marked *