ಸೌಹಾರ್ಧ ಭಾರತ…
1 min read
ಸೌಹಾರ್ಧ ಭಾರತ
*ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಜಮೀರ್ ಸಂದೇಶ*
* ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ ಎನ್ನುವ ಹೆಸರಿನಡಿಯಲ್ಲಿ ಪತ್ರ್ಯುತ್ತರ ನೀಡಿದೆ. ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ದೇವರ ಬಳಿ ಪೂಜೆ ಸಲ್ಲಿಸಲಾಗುತ್ತಿದೆ. ಇದರ ಮಧ್ಯ ಇದೀಗ ಕರ್ನಾಟಕದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ.
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ . ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.
ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ. ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಇಂತಹದೊಂದು ಸೂಚನೆ ನೀಡಿದ್ದು ಮೆಚ್ಚುಗೆಗೆ ಕಾರಣವಾಗಿದೆ.