ಮನೆಮನೆಗೆ ಪೊಲೀಸ್ ಯೋಜನೆ, ಸಮುದಾಯ ಸೌಹಾರ್ದತೆಗೆ ಹೊಸ ಹೆಜ್ಜೆ……
1 min read
ಮನೆಮನೆಗೆ ಪೊಲೀಸ್ ಯೋಜನೆ, ಸಮುದಾಯ ಸೌಹಾರ್ದತೆಗೆ ಹೊಸ ಹೆಜ್ಜೆ
ಬೇಲೂರು: ಸಾರ್ವಜನಿಕ ಸುರಕ್ಷತೆ ಮತ್ತು ಸಮುದಾಯ
3 ಪೊಲೀಸಿಂಗ್ ಅನ್ನು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯ “ಮನೆಮನೆಗೆ ಪೊಲೀಸ್ ” ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು ಪೊಲೀಸರು ನೇರವಾಗಿ ಜನರ ಮನೆಗಳಿಗೆ ಭೇಟಿ ನೀಡಿ, ಅವರ ಸಮಸ್ಯೆಗಳನ್ನು ಆಲಿಸಲು, ಅಪರಾಧ ತಡೆಗಟ್ಟುವಿಕೆ ಕುರಿತು ಅರಿವು ಮೂಡಿಸಲು ಮತ್ತು ಪೊಲೀಸ್-ಸಾರ್ವಜನಿಕ ಸಂಬಂಧಗಳನ್ನು ಸುಧಾರಿಸಲು ಉದ್ದೇಶಿಸಿದೆ ಎಂದು ಅರಸೀಕೆರೆ ವಿಭಾಗದ ಡಿವೈಎಸ್ಪಿ ಮೂರ್ತಿ ಹೇಳಿದರು.
ಪಟ್ಟಣದ ಹಳೆಬೀಡಿನಲ್ಲಿ ಪೊಲೀಸ್ ಠಾಣೆ ವತಿಯಿಂದ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮದಡಿಯಲ್ಲಿ ಜನರಿಗೆ ಇದರ ಉದ್ದೇಶ ಹೇಳುವ ಮೂಲಕ ಮಾತನಾಡಿದ ಅವರು
ಪೊಲೀಸರು ಜನರ ಬಳಿಗೆ ಹೋಗುವುದರಿಂದ ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಭಯವನ್ನು ಹೋಗಲಾಡಿಸಿ, ವಿಶ್ವಾಸವನ್ನು ಹೆಚ್ಚಿಸುತ್ತದೆ. ಹಾಗು ಸ್ಥಳೀಯ ಪ್ರದೇಶಗಳಲ್ಲಿನ ಅಪರಾಧ ಚಟುವಟಿ ಕೆಗಳು, ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಸಂಗ್ರಹಿಸಲಾಗುವುದು.
ಕಳ್ಳತನ, ದರೋಡೆ, ಸೈಬರ್ ಅಪರಾಧಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳಂತಹ ಅಪರಾಧಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು.ಮತ್ತು ಸಮಸ್ಯೆಗಳ ಶೀಘ್ರ ಇತ್ಯರ್ಥ, ಸಣ್ಣ ಪುಟ್ಟ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಪ್ರಯತ್ನಿಸುವುದು ಮತ್ತು ಅಗತ್ಯವಿದ್ದರೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗುವುದು ಎಂದರು.
ನಂತರ ಮಾತನಾಡಿದ ವೃತ್ತನಿರೀಕ್ಷಕ ಜಗದೀಶ್ ಬಿ ಆರ್. ಅಪರಾಧ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಉತ್ತೇಜಿಸುವುದು. ಈ ಯೋಜನೆಯಡಿ, ಪ್ರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗೊತ್ತುಪಡಿಸಿದ ಪೊಲೀಸ್ ಸಿಬ್ಬಂದಿಗಳು ನಿಯಮಿತವಾಗಿ ಮನೆಗಳಿಗೆ ಭೇಟಿ ನೀಡುತ್ತಾರೆ. ಅವರು ಕುಟುಂಬದ ಸದಸ್ಯರೊಂದಿಗೆ ಸಂವಾದ ನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸುತ್ತಾರೆ. ಮನೆಗಳ ಭದ್ರತಾ ವ್ಯವಸ್ಥೆಗಳ ಬಗ್ಗೆ ಸಲಹೆಗಳನ್ನು ನೀಡುತ್ತಾರೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪೊಲೀಸರನ್ನು ಸಂಪರ್ಕಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡುತ್ತಾರೆ. ವಿಶೇಷವಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ಇರುವ ಮನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪಿಎಸ್ಐ ಸಿದ್ದಲಿಂಗ ಬಾನಸೆ ಹಾಗು ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರು ಹಾಜರಿದ್ದರು.
ವರದಿ..
ಭಾರತಿಉಮೇಶರಾಜಅರಸು..

