ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು
ಚಿಕ್ಕಮಗಳೂರು: ಸಾರ್ವಜನಿಕರು ದೈಹಿಕ
ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಜಿಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಒಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹಾ.ಎಂ.ಶಶಿಕಲ ಸಲಹೆ ಮಾಡಿದರು.
ರೋಟರಿ ಕಾಫಿ ಲ್ಯಾಂಡ್ ನಗರದ ಖಾಸಗೀ ಹೋಟೆಲ್ ಸಭಾಂಗಣದಲ್ಲಿ ಗುರುವಾರ ಆ ರ್ಪಡಿಸಿದ್ದ ಮಾನಸಿಕ ಆರೋಗ್ಯ ಮತ್ತು ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯವೂ ಅಷ್ಟೇ ಮುಖ್ಯ, ಮಾನಸಿಕ ಆರೋಗ್ಯದಲ್ಲಿ ಎರುಪೇರಾದರೆ ದೈಹಿಕ ಆರೋಗ್ಯ ಹದಗೆಡುವುದರ ಜೊತೆಗೆ ವ್ಯಕ್ತಿಯ ಅದ ಪತನವಾಗುತ್ತದೆ ಎಂದರು.
ಮನುಷ್ಯ ಸಂಪೂರ್ಣ ಆರೋಗ್ಯವಂತನಾಗಿರಬೇಕಾದರೆ ಆತನ ಮಾನಸಿಕ ಸ್ಥಿತಿ ಉತ್ತಮವಾಗಿರಬೇಕು. ಮಾನಸಿಕವಾಗಿ ಸದೃಢನಾಗಿರಬೇಕು ಎಂದ ಅವರು ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮನಸ್ಸಿನ ಆರೋಗ್ಯಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಕಿವಿಮಾತು ಹೇಳಿದರು.
ತಾಲೂಕು ವೈದ್ಯಾಧಿಕಾರಿ ಡಾ.ಚೇತನ ಮಾತನಾಡಿ ಸ್ವಚ್ಛ ಮತ್ತು ಸುಂದರವಾದ ಪರಿಸರ, ಉತ್ತಮ ಚಿಂತನೆ, ಉತ್ತಮ
ಹವ್ಯಾಸಗಳು ಮಾನಸಿಕ ಸಹಕಾರಿ ಎಂದು ತಿಳಿಸಿದರು. ಆರೋಗ್ಯಕ್ಕೆ
ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಉತ್ತಮ `ಚಿಂತನೆ ಮತ್ತು ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ರೋಟರಿ ಕಾಫಿಲ್ಯಾಂಡ್ ಕಾರ್ಯದರ್ಶಿ ಎಂ. ಆನಂದ್ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಪರಿಸರ ಸ್ವಚ್ಚತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ “ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ನಾಗೇಶ್ ಕೆಂಜಿಗೆ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಪ್ರಬಾರಿ ಜಿಲ್ಲಾ ಸರ್ಜನ್ ಡಾ.ಎಚ್.ಬಿ. ಚಂದ್ರಶೇಖರ್, ತಾಲೂಕು ವೈದ್ಯಾಧಿಕಾರಿ ಡಾ. ಚೇತನ ಹಾಗೂ ಮಾನಸಿಕ ಆರೋಗ್ಯ ತಜ್ಞ ಡಾ. ಚಂದ್ರಶೇಖರ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಪದಾಧಿಕಾರಿಗಳಾದ ಉದ್ಯಮಿ ತ್ಯಾಗರಾಜ ಶೆಟ್ಟಿ, ರೋಟರಿ ಕಾಫಿಲ್ಯಾಂಡ್ ರವೀಂದ್ರನಾಥ್ ನಾಯ್ಡು, ಗುರುಮೂರ್ತಿ, ನಾಸೀರ್ ಹುಸೇನ್ ಉಪಸ್ಥಿತರಿದ್ದರು.
ವರದಿ..
ಭಾರತಿಉಮೇಶರಾಜಅರಸು..ಚಿಕ್ಕಮಗಳೂರು..
8971536986….

