ಜಾತಿ ಸಮೀಕ್ಷೆಯಲ್ಲಿ ಬೌದ್ಧ ಎಂದು ಬರೆಸುವಂತೆ ಮನವಿ….
1 min read
ಜಾತಿ ಸಮೀಕ್ಷೆಯಲ್ಲಿ ಬೌದ್ಧ ಎಂದು ಬರೆಸುವಂತೆ ಮನವಿ
ಚಿಕ್ಕಮಗಳೂರು: ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯ ಸರ್ಕಾರ ನಡೆಸುತ್ತಿರುವ ಆರ್ಥಿಕ ಮತ್ತು ಸಾಮಾಜಿ-ಕ ಸಮೀಕ್ಷೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳು ಮತ್ತು ಅನುಯಾಯಿಗಳು ಧರ್ಮದ ಕಾಲಂನಲ್ಲಿ ಬೌದ್ಧ ಎಂದು ಬರೆಸುವಂತೆ ಡಾ|ಬಿ.ಆರ್.ಅಂಬೇಡ್ಕರ್ ವಿಚಾರ ವೇದಿಕೆ(ಡಿಎಂಎಟಿ) ಗೌರವಾಧ್ಯಕ್ಷ ಡಿ.ಪುಟ್ಟಸ್ವಾಮಿ ಮನವಿ ಮಾಡಿದರು.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗೌತಮ ಬುದ್ಧರು ಈ ನೆಲದಲ್ಲಿ ಜನಿಸಿ ವಿಶ್ವಕ್ಕೆ ಕರುಣೆ, ಪ್ರೀತಿ, ಮೈತ್ರಿಯನ್ನು ಬೋಧಿಸಿದ್ದಾರೆ. ಪಂಚಶೀಲ ಮತ್ತು ಅಷ್ಟಾಂಗ ಮಾರ್ಗದ ಮೂಲಕ ಮನುಷ್ಯರನ್ನು ತಿದ್ದಿ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವ ಮೌಲ್ಯಗಳನ್ನು ರೂಢಿಸಿಕೊಂಡು ಸಾರ್ಥಕ ಬದುಕು ಬದುಕಲು ಗೌತಮ ಬುದ್ಧರು ಮಾರ್ಗದರ್ಶನ ಮಾಡಿ ದ್ದಾರೆ ಎಂದರು.
ಅಂಬೇಡ್ಕರ್ ಅವರ ಮಾರ್ಗವನ್ನು ಅನುಸರಿಸುತ್ತಿರುವರು ರಾಜ್ಯ ಸರ್ಕಾರ ನಡೆಸುತ್ತಿರುವ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಬೌದ್ಧ ಎಂದು ಬರೆಸುವಂತೆ ವಿನಂತಿಸಿದ ಅವರು, ಹೀಗೆ ಬರೆಸಲು ಯಾವುದೇ ಸರ್ಟಿಫಿ ಕೇಟ್ ಅಗತ್ಯವಿಲ್ಲ, ಜಾತಿ ಕಾಲಂನಲ್ಲಿ ತಮ್ಮ ಜಾತಿಯನ್ನು ಬರೆಸಿ, ಧರ್ಮದ ಕಾಲಂನಲ್ಲಿ ಬೌದ್ಧ ಎಂದು ಬರೆಸುವಂತೆ ತಿಳಿಸಿದರು.
ಪರಿಶಿಷ್ಟ ಜಾತಿಯವರು ಬೌದ್ಧ ಎಂದು ಬರೆಸಿದ್ದಲ್ಲಿ 1990 ರ ಕೇಂದ್ರ ಸರ್ಕಾರದ ಆದೇಶದಂತೆ ಮೀಸಲಾತಿಗೆ ಯಾವುದೆ ತೊಂದರೆ ಆಗುವುದಿಲ್ಲ ಎಂದರು. ಸುದ್ದಿಗೋಷ್ಟಿಯಲ್ಲಿ ಬಿ.ಸಿ.ಕುಮಾರ್, ರವಿ, ರಂಜಿತ್, ಸುರೇಶ್, ಜಗದೀಶ್ ಸೇರಿದಂತೆ ಇತರರು ಇದ್ದರು.

