PDO ಕೃಷ್ಣಪ್ಪರಿಗೆ ಭಾವಪೂರ್ಣ ಬೀಳ್ಕೊಡುಗೆ…
1 min read
PDO ಕೃಷ್ಣಪ್ಪರಿಗೆ ಭಾವಪೂರ್ಣ ಬೀಳ್ಕೊಡುಗೆ…
ಮೂಡಿಗೆರೆ ತಾಲೂಕು.ಬಣಕಲ್ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಆರು ವರ್ಷಗಳಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಗಿ ನಿಷ್ಠೆಯಿಂದ ಸೇವೆ ಸಲ್ಲಿಸಿ, ಗ್ರಾಮ ಪಂಚಾಯಿತಿ ಹಾಗೂ ವ್ಯಾಪ್ತಿಯ ಗ್ರಾಮಗಳ ಜನರ ವಿಶ್ವಾಸ ಗಳಿಸಿದ ಬಿ. ಎನ್. ಕೃಷ್ಣಪ್ಪ ಅವರು ಈಗ ಕಿರುಗುಂದ ಪಂಚಾಯಿತಿಗೆ ವರ್ಗಾವಣೆಯಾಗಿದ್ದಾರೆ. ”
ಈ ಸಂದರ್ಭದಲ್ಲಿ ಬಣಕಲ್ ಗ್ರಾಮ ಪಂಚಾಯಿತಿ ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮ ಏರ್ಪಡಿಸಲಾಯಿತು. ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿ, ಬಿ. ಎನ್.ಕೃಷ್ಣಪ್ಪ ಅವರ ಸೇವಾ ಮನೋಭಾವವನ್ನು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಸಿಬ್ಬಂದಿಗಳು ಸೇರಿದಂತೆ ಅನೇಕರು ಹಾಜರಿದ್ದರು. ಎಲ್ಲರೂ ಕೃಷ್ಣಪ್ಪರ ಕಾರ್ಯ ಶೈಲಿಯನ್ನು ಮೆಚ್ಚಿ, ಹೊಸ ಹುದ್ದೆಯಲ್ಲಿಯೂ ಅದೇ ಉತ್ಸಾಹದಿಂದ ಕೆಲಸ ಮಾಡುವಂತೆ ಶುಭ ಹಾರೈಸಿದರು.
ಬೀಳ್ಕೊಡುಗೆ ಸ್ವೀಕರಿಸಿದ ಬಿ. ಎನ್. ಕೃಷ್ಣಪ್ಪರು ಮಾತನಾಡಿ, ಬಣಕಲ್ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಅವಕಾಶ ನನಗೆ ಲಭಿಸಿದುದು ನನ್ನ ಅದೃಷ್ಟ, ಜನರ ಪ್ರೀತಿ, ಸಹಕಾರ ಮರೆಯಲಾಗದಂಥದ್ದು. ಮುಂದೆ ಎಲ್ಲೆಡೆ ಇದೇ ರೀತಿಯ ನಂಬಿಕೆಗೆ ತಕ್ಕಂತೆ ಕೆಲಸ ಮಾಡುವೆ? ಎಂದು ಕೃತಜ್ಞತೆ ಸಲ್ಲಿಸಿದರು.

