लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ.*

1 min read

ಅವಿನ್ ಟಿವಿ ಸುದ್ದಿಜಾಲ ✒️: *ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ.*
••••••••••••
ಬೆಂಗಳೂರು ನ. 14 : ಒಂದು ಶತಮಾನವನ್ನು ಇಡಿಯಾಗಿ ಅನುಭವಿಸಿ 114 ವರ್ಷಗಳ ಕಾಲ ಬಾಳಿ ಬದುಕಿದ ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12:00ಘಂಟೆಗೆ ನಿಧನ ಹೊಂದಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು.

ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, ಕಿಲೋಮೀಟರ್ಗಳ ಉದ್ದ ನೀರನ್ನು ಹೊತ್ತು ಗಿಡಗಳಿಗೆ ಉಣಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, 385 ಆಲದ ಮರಗಳನ್ನು ನೆಟ್ಟು ಪೋಷಿಸುವುದರೊಂದಿಗೆ ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ.

ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ದೊರಕಿದೆ.

ಎಲ್ಲ ಪ್ರಶಸ್ತಿ ಪುರಸ್ಕಾರಗಳ ಜೊತೆಗೆ ನಾಡಿನ ಪ್ರತಿ ಜನಮನದ ಹೃದಯದಲ್ಲಿ ಈ ತಾಯಿ ಸಾಲುಮರದ ತಿಮ್ಮಕ್ಕ ತನ್ನ ವೃಕ್ಷ ಪ್ರೇಮದ ಮೂಲಕ ನಾಡಿನ ಜನಮನದ ಹೃದಯದಲ್ಲಿ ಹಚ್ಚ ಹಸುರಿನಂತೆ ಸದಾ ಚಿರಾಯು ಆಗಿದ್ದಾರೆ.
•••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ ✒️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed