ಜ.24ರಂದು ಪ್ರಥಮ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ….
1 min read
ಜ.24ರಂದು ಪ್ರಥಮ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
ಚಿಕ್ಕಮಗಳೂರು: ಪ್ರಥಮ ಬಾರಿಗೆ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದ ಶ್ರೀ ಗುರುಕೃಪಾ ಪ್ರೌಢಶಾಲಾ ಆವರಣದಲ್ಲಿ ಜನವರಿ 24 ರ ಶನಿವಾರ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಜ. 24ರ ಬೆಳಗ್ಗೆ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಲು ನಮ್ಮನಾಡಿನ ಹಿರಿಯ ಚೇತನ ನಾಡೋಜ ಡಾ. ಗೊ. ರು. ಚನ್ನಬಸಪ್ಪ ಆಗಮಿಸಲಿದ್ದಾರೆ. ಕಡೂರು ಕ್ಷೇತ್ರದ ಶಾಸಕರಾದ ಕೆ ಎಸ್ ಆನಂದ್ ಹಾಗೂ ಮಕ್ಕಳ ಸಾಹಿತಿಗಳು ಭಾಗವಹಿಸಲಿದ್ದಾರೆ. ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಜಿ. ಪಿ. ಪ್ರಭು ಕುಮಾರ್ ಆಯ್ಕೆಯಾಗಿದ್ದಾರೆ. ಹಾಗೂ ವಿವಿಧ ಸಮಿತಿಗಳಲ್ಲಿ ಜಿ. ಎಂ. ಎನ್. ಸ್ವಾಮಿ, ಜಿ. ಎಸ್. ಲಿಂಗರಾಜು ಇನ್ನಿತರರು ಆಯ್ಕೆಯಾಗಿದ್ದಾ-ರೆ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಿಕ್ಕನಲ್ಲೂರು ಎಸ್ ಪರಮೇಶ್ ಮತ್ತು ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್,ಹೋಬಳಿ ಘಟಕದ ಅಧ್ಯಕ್ಷರಾದ ಶಿವಲಿಂಗಸ್ವಾಮಿ, ಹೋಬಳಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಜಯಣ್ಣ ಹಾಗೂ ಗ್ರಾಮದ ವಿವಿಧ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ, ಯುವ ಘಟಕ ಪದಾಧಿಕಾರಿಗಳು ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದರು.

