ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ನಡಾವಳಿ…..
1 min read
ದಿನಾಂಕ 11/03/2026 ರಂದು ಶ್ರೀ ಬಿ.ಎಸ್ ಜಯರಾಮ್ ಮಾನ್ಯ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ನಡಾವಳಿ.
ಉಪಸ್ಥಿತಿ:
1. ಶ್ರೀ ಬಿ.ಎಸ್. ಜಯರಾಮ್ ಮಾನ್ಯ ಅಧ್ಯಕ್ಷರು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
2. ಶ್ರೀಮತಿ ದಯಾವತಿ ಎಂ. ಸದಸ್ಯ ಕಾರ್ಯದರ್ಶಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
3. ಶ್ರೀ ಹರ್ಷ ಮೆಲ್ವಿನ್ ಲಾಸ್ರಾದೋ, ಮಾನ್ಯ ಸದಸ್ಯರು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
4. ಶ್ರೀ ಅರುಣ್ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
5. ಶ್ರೀ ಗುರುವಪ್ಪ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
6. ಶ್ರೀ ಶ್ರೀನಿವಾಸ್, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
7. ಶ್ರೀ ನವೀನ್, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
8. ಶ್ರೀ ಭರತ್ ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
9. ಶ್ರೀಮತಿ ಜಯಮ್ಮ, ಮಾನ್ಯ ಸದಸ್ಯರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ
ಗೃಹಲಕ್ಷ್ಮಿ ಯೋಜನೆ:
ಇಲಾಖಾಧಿಕಾರಿಗಳು ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 29065 ಗೃಹಲಕ್ಷ್ಮಿ ಫಲಾನುಭವಿಗಳು ಇದ್ದು, ಇದರಲ್ಲಿ 28350 ಫಲಾನುಭವಿಗಳಿಗೆ ಯೋಜನೆಯ ಹಣ ಬರುತ್ತಿರುವುದಾಗಿ ಹಾಗೂ ಯೋಜನೆಯಿಂದ ಬಾಕಿ ಉಳಿದ ರೇಷನ್ ಕಾರ್ಡ್‌ಗಳು NPCI-145, IT/GST-210, ತಿದ್ದುಪಡಿ/ಮರಣ-360 ಒಟ್ಟು 715 ಇರುತ್ತದೆ.
ಅನ್ನಭಾಗ್ಯ ಯೋಜನೆ:
ಆಹಾರ ಶಿರಸ್ತೇದಾರರು ಸಭೆಗೆ ಅನ್ನ ಭಾಗ್ಯ ಯೋಜನೆಯ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 843 ಬಿಪಿಎಲ್ ಪಡಿತರಚೀಟಿಯನ್ನು ರದ್ದುಪಡಿಸಿ ಎಪಿಎಲ್ ಕಾರ್ಡಿಗೆ ವರ್ಗಾಯಿಸಲಾಗಿದೆ. ಪಡಿತರ ಚೀಟಿಗೆ E-KYC ನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ತಿಳಿಸಿದರು. ಅನ್ನಭಾಗ್ಯ ಯೋಜನೆಯ ಅಕ್ಕಿ ಬರುವುದು ವಿಳಂಭವಾಗಿರುತ್ತದೆ. ಹಾಗೂ ಇಂದಿರಾ ಕಿಟ್ ಪಡಿತರ ವಿತರಣೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಶೀಘ್ರದಲ್ಲೆ ಇಂದಿರಾ ಕಿಟ್ ಪಡಿತರ ವಿತರಣೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆ:
ಇಲಾಖಾಧಿಕಾರಿಗಳು ಗೃಹಜ್ಯೋತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಒಟ್ಟು 25954 ಗೃಹಜ್ಯೋತಿ ಫಲಾನುಭವಿಗಳು ಇದ್ದು, 22598 ಫಲಾನುಭವಿಗಳಿಗೆ ಸರ್ಕಾರದಿಂದ ರೂ. 9438346/- ಅನುದಾನ ಬಿಡುಗಡೆಯಾಗಿರುತ್ತದೆ. ಹಾಗೂ ಸರ್ಕಾರದ ಆದೇಶದಂತೆ 127 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಹಾಗೂ ಗೃಹಜ್ಯೋತಿ ಯೋಜನೆಯಲ್ಲಿ ಅಧಿಕ ವಿದ್ಯುತ್ ಬಳಸಿರುವ ಫಲಾನುಭವಿಗಳ ಸಂಖ್ಯೆ 3229 ಇದ್ದು, ರೂ.1058761/- ಬಿಲ್ ಪಾವತಿಸಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಯುವನಿಧಿ ಯೋಜನೆ:
ಯುವನಿಧಿ ಯೋಜನೆಯಡಿ ಈವರೆಗೂ ಪದವಿ ವಿಭಾಗದಲ್ಲಿ 3929 ಹಾಗೂ ಡಿಪ್ಲೊಮೋ ವಿಭಾಗದಲ್ಲಿ 45 ವಿಧ್ಯಾರ್ಥಿಗಳು ನೊಂದಣಿಯಾಗಿರುತ್ತಾರೆ. ಸರ್ಕಾರದಿಂದ ರೂ.11854500/- ಅನುದಾನ ಬಿಡುಗಡೆಯಾಗಿರುತ್ತದೆ. ಕೌಶಲ್ಯಾಭಿವೃದ್ದಿ ತರಭೇತಿಗೆ ನೊಂದಣಿ ಮಾಡಿಕೊಂಡ ವಿಧ್ಯಾರ್ಥಿಗಳು ತರಭೇತಿಗೆ ಹಾಜರಾಗದಿದ್ದಲ್ಲಿ ಅವರು ಉದ್ಯೋಗದಲ್ಲಿರುವ ಬಗ್ಗೆ ಖಚಿತಪಡಿಸಿಕೊಂಡು ಯೋಜನೆಯಿಂದ ಕೈ ಬಿಡಲು ಮಾನ್ಯ ಅಧ್ಯಕ್ಷರು ತಿಳಿಸಿದರು.
ಶಕ್ತಿ ಯೋಜನೆ:
ಇಲಾಖಾಧಿಕಾರಿಗಳು ಶಕ್ತಿ ಯೋಜನೆ ಬಗ್ಗೆ ಪ್ರಗತಿ ವರದಿ ಮಂಡಿಸಿದರು. ತಾಲ್ಲೂಕಿನಲ್ಲಿ ಫೆಬ್ರವರಿ ಮಾಹೆಯಲ್ಲಿ ಪ್ರಸ್ತುತ 331734 ಫಲಾನುಭವಿಗಳು ಬಸ್ ನಲ್ಲಿ ಪ್ರಯಾಣಿಸಿದ್ದು, ರೂ.16135046/- ಸರ್ಕಾರದಿಂದ ಅನುದಾನ ಬಿಡುಗಡೆಯಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.
ಇತರೆ ವಿಷಯಗಳು:
ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಹಾಗೂ ಶ್ರೀ ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ (ರಿ), ಸಾಂತ್ವನ ಮಹಿಳಾ ಸಹಾಯವಾಣಿ ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ(ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಸಂಘ ಮೂಡಿಗೆರೆ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರವನ್ನು ದಿನಾಂಕ 13/03/2026 ರಂದು ಬೆಳಿಗ್ಗೆ 11-00 ಗಂಟೆಗೆ ಅಡ್ಯಂತಾಯ ರಂಗಮಂದಿರ ಮೂಡಿಗೆರೆ ಇಲ್ಲಿ ನಡೆಸುತ್ತಿದ್ದು, ಸದರಿ ಕಾರ್ಯಾಗಾರಕ್ಕೆ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಿಕೊಡಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಪರವಾಗಿ ಶ್ರೀ ಬಿ.ಎಸ್. ಜಯರಾಮ್ ಅಧ್ಯಕ್ಷರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರವರು ಕೋರಿದರು.
ಅಧ್ಯಕ್ಷರು ಸದಸ್ಯ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ
ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ

