लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಮೂಡಿಗೆರೆ: ಗ್ಯಾಸ್ ಸಿಲಿಂಡರ್ ಸರಬರಾಜಿಲ್ಲದೆ ಬಿಸಿಯೂಟಕ್ಕೆ ಸಂಕಷ್ಟ….

1 min read

‎ಮೂಡಿಗೆರೆ: ಗ್ಯಾಸ್ ಸಿಲಿಂಡರ್ ಸರಬರಾಜಿಲ್ಲದೆ ಬಿಸಿಯೂಟಕ್ಕೆ ಸಂಕಷ್ಟ.
‎
‎ಮೂಡಿಗೆರೆ:  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಐದು ದಿನಗಳಿಂದ ಗ್ಯಾಸ್ ಸಿಲಿಂಡರ್ ಸರಬರಾಜು ಆಗದ ಹಿನ್ನೆಲೆ ಬಿಸಿಯೂಟ ಯೋಜನೆ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಅಡುಗೆ ಸಿಬ್ಬಂದಿ ಬಯಲಿನಲ್ಲಿ ಸೌದೆ ಬಳಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
‎
‎
‎ಶಾಲೆಯಲ್ಲಿ ಪ್ರತಿದಿನ ನೂರಾರು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಲಾಗುತ್ತದೆ. ಆದರೆ ಗ್ಯಾಸ್ ಸಿಲಿಂಡರ್ ಪೂರೈಕೆ ಆಗದೆ ಇರುವುದರಿಂದ ಅಡುಗೆ ಸಿಬ್ಬಂದಿ ಪರದಾಡುತ್ತಿದ್ದಾರೆ. ಅನಿವಾರ್ಯವಾಗಿ ಬಯಲಿನಲ್ಲಿ ಸೌದೆ ಬಳಸಿ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ಊಟ ಸಿದ್ಧಪಡಿಸಲಾಗುತ್ತಿದೆ.
‎
‎ಈ ಕುರಿತು ಶಾಲಾ ಅಧಿಕಾರಿಗಳು ಗ್ಯಾಸ್ ಏಜೆನ್ಸಿಗೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಜಿಲ್ಲಾಧಿಕಾರಿಗಳ ನಿರ್ದೇಶನವಿದ್ದರೂ ಗ್ಯಾಸ್ ಏಜೆನ್ಸಿಯ ನಿರ್ಲಕ್ಷ್ಯದಿಂದ ಸಮಸ್ಯೆ ಮುಂದುವರಿದಿದೆ ಎಂದು ಶಾಲಾ ಸಿಬ್ಬಂದಿ ಆರೋಪಿಸಿದ್ದಾರೆ.

‎
‎ಇದೀಗ ವಿದ್ಯಾರ್ಥಿಗಳ ಪರೀಕ್ಷಾ ಸಮಯವಾಗಿರುವುದರಿಂದ ಶಿಕ್ಷಕರು ಮತ್ತು ಸಿಬ್ಬಂದಿಗೆ ತೊಂದರೆ ಉಂಟಾಗಿದೆ. ಅಡುಗೆ ಸಿದ್ಧಪಡಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಬಿಸಿಯೂಟ ವ್ಯವಸ್ಥೆ ನಿರ್ವಹಿಸುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ತಕ್ಷಣ ಗ್ಯಾಸ್ ಸಿಲಿಂಡರ್ ಸರಬರಾಜು ವ್ಯವಸ್ಥೆ ಸರಿಪಡಿಸಬೇಕೆಂದು ಶಿಕ್ಷಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.
‎

About Author

Leave a Reply

Your email address will not be published. Required fields are marked *

You may have missed