लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
16/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕಬ್ಬಿಣ ಸೇತುವೆಯ ಬಳಿ ನಡುರಾತ್ರಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಸರ್ಕಾರಿ ಬಸ್ ಪಲ್ಟಿ ಎಂಟು ಜನರಿಗೆ ಗಂಭೀರ ಗಾಯ…..

1 min read

ಅವಿನ್ ಟಿವಿ ಸುದ್ದಿಜಾಲ ✍️: ಕಬ್ಬಿಣ ಸೇತುವೆಯ ಬಳಿ ನಡುರಾತ್ರಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಸರ್ಕಾರಿ ಬಸ್ ಪಲ್ಟಿ ಎಂಟು ಜನರಿಗೆ ಗಂಭೀರ ಗಾಯ.

ಆಲ್ದೂರು : ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆಯ ಸಮೀಪ ಕೊಡಾಳು ಗ್ರಾಮದ ಬಳಿ ಸರ್ಕಾರಿ ಬಸ್ ನಡುರಾತ್ರಿ ಸಮಯದಲ್ಲಿ ಪಲ್ಟಿಯಾಗಿ ಎಂಟು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್, ಮಾರ್ಗ ಮಧ್ಯೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ನೆರವಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷ, ವಾಹನದ ನಿರ್ವಹಣಾ ಸಮಸ್ಯೆ ಅಥವಾ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ,
ಅತಿಯಾದ ವೇಗವೂ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಈ ಘಟನೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
•••••••••••••••
ಡಿ ಎಂ ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ …… ✍️
ಚಿಕ್ಕಮಗಳೂರು

About Author

Leave a Reply

Your email address will not be published. Required fields are marked *

You may have missed