लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡಿಗೆರೆ ತಾಲೂಕಿನ ಬಣಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ…

1 min read

*ಮೂಡಿಗೆರೆ ತಾಲೂಕಿನ ಬಣಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶದ ಅತ್ಯುನ್ನತ ಸಾಧನೆ.* ದ್ವಿತೀಯ ಪಿಯುಸಿ ಕಲಾ , ವಾಣಿಜ್ಯ . ಮತ್ತು ವಿಜ್ಞಾನ ವಿಭಾಗದಲ್ಲಿ ಒಟ್ಟು 35 ವಿದ್ಯಾರ್ಥಿಗಳಲ್ಲಿ .2 ವಿದ್ಯಾರ್ಥಿಗಳು ಅತ್ಯುನ್ನತ ಶೇಣಿ,26 ವಿದ್ಯಾರ್ಥಿಗಳು ಪ್ರಥಮ ದರ್ಜೆ, 7ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಯಲ್ಲಿ ಪಾಸ್ ಆಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ..
ವಾಣಿಜ್ಯ ವಿಭಾಗದಲ್ಲಿ ಕುಮಾರಿ ನಾಫಿಯ ಯ 537ಅಂಕ ಪಡೆದು ಕಾಲೇಜ್ ಗೆ ಪ್ರಥಮ ಸ್ಥಾನ ಮತ್ತು ಕಲಾ ವಿಭಾಗದಲ್ಲಿ ಕುಮಾರಿ ರೇಖಾ 532 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ….
ರಾಜ್ಯದ ಶೇಕಡಾ 100 ಫಲಿತಾಂಶ ಪಡೆದ 74 ಸರ್ಕಾರಿ ಕಾಲೇಜುಗಳಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಣಕಲ್ ಆಗಿರುವುದು ಹೆಮ್ಮೆಯ ವಿಷಯವಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಮುಖ್ಯವಾಗಿ , ಎಲ್ಲಾ ಉಪನ್ಯಾಸಕರು, ಪ್ರಾಂಶುಪಾಲರು, ಕಾಲೇಜ್ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು ಹಾಗೂ ಬಣಕಲ್ ವ್ಯಾಪ್ತಿಯ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಣಕಲ್ ನಲ್ಲಿ ದಾಖಲಾತಿ ಪಡೆಯಬಹುದಾಗಿದೆ. ಮೂಡಿಗೆರೆ ತಾಲ್ಲೂಕಿನ ಹೆಚ್ಚಿನ ವಿದ್ಯಾರ್ಥಿಗಳು ಈ ಕಾಲೇಜಿಗೆ ಸೇರಿಕೊಂಡು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಮ್ಮ ಚಾನಲ್ ಮೂಲಕ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು, ಹಾಗೂ ಕಾಲೇಜ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಸರ್ವ ಸದಸ್ಯರು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಬರಹ ಕೃಪೆ.. ಶಂಕರ್ ಉಪನ್ಯಾಸಕರು. ಬಣಕಲ್

About Author

More Stories

Leave a Reply

Your email address will not be published. Required fields are marked *

You may have missed