लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಿಜ್ಞಾನ ವಿಭಾಗದಲ್ಲಿ ನೂರಕ್ಕೆ ನೂರರಷ್ಟು ಪಲಿತಾಂಶ~ ಬಸವನಹಳ್ಳಿ ಬಾಲಿಕಾ ಪದವಿಪೂರ್ವ ಕಾಲೇಜು..

1 min read

ಅವಿನ್ ಟಿವಿ ಸುದ್ದಿಜಾಲ ✍️: ವಿಜ್ಞಾನ ವಿಭಾಗದಲ್ಲಿ ನೂರಕ್ಕೆ ನೂರರಷ್ಟು ಪಲಿತಾಂಶ~ ಬಸವನಹಳ್ಳಿ ಬಾಲಿಕಾ ಪದವಿಪೂರ್ವ ಕಾಲೇಜು.

ಚಿಕ್ಕಮಗಳೂರು ಏ ೧೨, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ 97 ರಷ್ಟು ಫಲಿತಾಂಶ ಗಳಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇ100 ಫಲಿತಾಂಶ ದಾಖಲಿಸಿದೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ ಎಲ್ಲಾ 60 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಕಲಾವಿಭಾಗದಲ್ಲಿ ಶೇ 96.5, ವಾಣಿಜ್ಯ ವಿಭಾಗದಲ್ಲಿ ಶೇ95.6 ಫಲಿತಾಂಶ ಗಳಿಸಿದೆ.

ವಿಜ್ಞಾನ ವಿಭಾಗದಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಕಲಾವಿಭಾಗದಲ್ಲಿ 8, ವಾಣಿಜ್ಯ ವಿಭಾಗದಲ್ಲಿ 22 ವಿದ್ಯಾರ್ಥಿನಿಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಪುಷ್ಪಲತಾ 563, ಕಲಾ ವಿಭಾಗದಲ್ಲಿ ಎಸ್. ರಂಜಿತ 543, ವಾಣಿಜ್ಯ ವಿಭಾಗದಲ್ಲಿ ನಿಶಾಕುಮಾರಿ 585 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಕೆ.ಜಿ. ಸತೀಶ್ ಶಾಸ್ತ್ರಿ ತಿಳಿಸಿದ್ದಾರೆ.
••••••••••••••••
ಡಿ.ಎಂ.ಮಂಜುನಾಥಸ್ವಾಮಿ
ಅವಿನ್ ಟಿವಿ ಸುದ್ದಿಜಾಲ ….. ✍️
ಚಿಕ್ಕಮಗಳೂರು.

About Author

Leave a Reply

Your email address will not be published. Required fields are marked *

You may have missed