AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶಿಡ್ಲಘಟ್ಟ : ತಾಲೂಕಿನ ನೈಸರ್ಗಿಕ ಸಂಪತ್ತು ಉಳಿಯಬೇಕಾದರೆ ಈ ಭಾಗದ ಎಲ್ಲಾ 09 ಗ್ರಾಮ ಪಂಚಾಯಿತಿಗಳಲ್ಲಿಯೂ ಜೆಡಿಎಸ್ ಅಧಿಕಾರ ಹಿಡಿಯಬೇಕು ಬಿ.ಎನ್.ರವಿಕುಮಾರ್ ಹೇಳಿದರು.

1 min read
Featured Video Play Icon

ಶಿಡ್ಲಘಟ್ಟ : ತಾಲೂಕಿನ ಸಾದಲಿ ಹಾಗು ಬಶೆಟ್ಟಹಳ್ಳಿ ಹೋಬಳಿಯಲ್ಲಿರುವ ನೈಸರ್ಗಿಕ ಸಂಪತ್ತು ಉಳಿಯಬೇಕಾದರೆ ಈ ಭಾಗದ ಎಲ್ಲಾ 09 ಗ್ರಾಮ ಪಂಚಾಯಿತಿಗಳಲ್ಲಿಯೂ ಜೆಡಿಎಸ್ ಅಧಿಕಾರ ಹಿಡಿಯಬೇಕು ಎಂದು ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಹೇಳಿದರು.

ತಾಲೂಕಿನ ಎಸ್.ವೆಂಕಟಾಪುರ ಬಳಿಯಿರುವ ಶ್ರೀ ಮುನಿಯಪ್ಪಕಟ್ಟೆ ದೇವಾಲಯದ ಆವರಣದಲ್ಲಿ  ತಾಲೂಕು ಜೆಡಿಎಸ್ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಬಶೆಟ್ಟಹಳ್ಳಿ ಹಾಗು ಸಾದಲಿ ಹೋಬಳಿಯ ಜೆಡಿಎಸ್ ಮುಖಂಡರ ಹಾಗು ಕಾರ್ಯಕರ್ತರ ಚುನಾವಣಾ ಪೂರ್ವಸಿದ್ದತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಶೆಟ್ಟಹಳ್ಳಿ ಹಾಗು ಸಾದಲಿ ಹೋಬಳಿಯಲ್ಲಿ ಬಹಳಷ್ಟು ನೈಸರ್ಗಿಕ ಸಂಪತ್ತು ಅಡಗಿದ್ದು ಇದನ್ನು ಉಳಿಸುವ ಕೆಲಸ ಆಗಬೇಕಿದೆ. ಯಾವುದೇ ಜನಪರ ಕಾರ್ಯಗಳನ್ನು ಮಾಡದೇ ಕೇವಲ ದೇಶದ ಜನರ ಮನಸ್ಸಿನಲ್ಲಿ ಧರ್ಮದ ಬಗ್ಗೆ ಪ್ರಚೋದನೆ ಮಾಡಿ ಅಧಿಕಾರ ಹಿಡಿದಿರುವ ರಾಜ್ಯ ಹಾಗು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಅರಣ್ಯ ಭೂಮಿಯನ್ನು ಲಪಟಾಯಿಸಲು ಮುಂದಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಮಾಡಿರುವ ಜನಪರ ಕಾರ್ಯಕ್ರಮಗಳನ್ನು ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಮುಟ್ಟಿಸುವ ಮೂಲಕ ಕಾರ್ಯಕರ್ತರು ಹಾಗು ಮುಖಂಡರು ಈ ಬಾರಿಯ ಗ್ರಾ.ಪಂ ಚುನಾವಣೆ ಎದುರಿಸಲು ಸಿದ್ದರಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ ಇದೇ ತಿಂಗಳು 22 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು ಗ್ರಾಮದ ಎಲ್ಲಾ ಮುಖಂಡರು ಸೇರಿದಂತೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಆಯಾ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗು ಕಾರ್ಯಕರ್ತರು ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜೊತೆಗೆ ಯಾರೇ ಅಭ್ಯರ್ಥಿಯಾಗಲಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಪಂಚಾಯಿತಿಗಳು ಜೆಡಿಎಸ್ ವಶವಾಗುತ್ತವೆ. ಈ ನಿಟ್ಟಿನಲ್ಲಿ ಚುನಾವಣೆ ಸಮಯದಲ್ಲಿ ಯಾವುದೇ ಮನಸ್ಥಾಪವಿಟ್ಟುಕೊಳ್ಳದೇ ಎಲ್ಲರೂ ಪ್ರಾಮಾಣಿಕವಾಗಿ ದುಡಿಯಲಿ ಮುಂದಾಗಬೇಕು ಎಂದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author