ಇಂದು 6ನೇ ಜಾನಪದ ಸಮ್ಮೇಳನ….
1 min read
ಇಂದು 6ನೇ ಜಾನಪದ ಸಮ್ಮೇಳನ
ಚಿಕ್ಕಮಗಳೂರು : ಕರ್ನಾಟಕ ಜಾನಪದ
ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ 6.ನೇ ಜಾನಪದ ಸಮ್ಮೇಳನ ನಡೆಯಲಿದೆ.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವೆ ಮೋಟಮ್ಮನವವರನ್ನು 9.ಗಂಟೆಗೆ ಅಲಂಕೃತ ಎತ್ತಿನ ಗಾಡಿಯಲ್ಲಿ ಕಲಾತಂಡಗಳೊಂದಿಗೆ ಕರೆತರಲಾಗುತ್ತದೆ. ನಂತರ ಸಮ್ಮೇಳನವನ್ನು ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ. ಹಿ.ಚಿ. ಭೋರಲಿಂಗಯ್ಯ ಉದ್ಘಾಟಿಸಲಿದ್ದಾರೆ. ನಂತರ ವಿವಿಧ ಗೋಷ್ಠಿಗಳು ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 5.30.ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಹಲವು ಸಾಧಕರಿಗೆ ಸನ್ಮಾನ ನಡೆಯಲಿದೆ.

