ಚಿಕ್ಕಮಗಳೂರು ಆಜಾದ್ ವೃತ್ತದಲ್ಲಿ ಜೆಡಿಎಸ್ ಪ್ರತಿಭಟನೆ…
1 min read
ಆಜಾದ್ ವೃತ್ತದಲ್ಲಿ ಜೆಡಿಎಸ್ ಪ್ರತಿಭಟನೆ
ಚಿಕ್ಕಮಗಳೂರು: ಇತ್ತೀಚೆಗೆ ಸಂಸತ್ತಿನಲ್ಲಿ ನಾರಿಶಕ್ತಿ ಮಸೂದೆ ವಿರುದ್ದ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಆರೋಪಿಸಿ ಜೆಡಿಎಸ್ ವತಿಯಿಂದ ಇಂದು ನಗರದ ಆಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಬೇಕೆಂದು ನಾರಿ ಶಕ್ತಿ ಮಸೂದೆಯನ್ನು ಜಾರಿಗೊಳಿಸಲು ಹೊರಟ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಸೂದೆಯನ್ನು ವಿರೋಧಿಸುವ ಮೂಲಕ ಮಹಿಳಾ ವಿರೋಧಿ ಧೋರಣೆಯನ್ನು ಪ್ರದರ್ಶಿಸಿದೆ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಮುಖಂಡರು ಸ್ವಯಂ ಪ್ರೇರಿತರಾಗಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಬೆಂಬಲಿಸುವವರೆಗೂ ಜೆಡಿಎಸ್ ತನ್ನ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ, ನಗರಸಭಾಧ್ಯಕ್ಷೆ ಶೀಲಾ ದಿನೇಶ್, ಸದಸ್ಯ ಎ.ಸಿ. ಕುಮಾರ್, ಮಹಿಳಾಧ್ಯಕ್ಷೆ ಜಯಂತಿ, ಮಹಾಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಮುಖಂಡರಾದ ದೇವಿ ಪ್ರಸಾದ್, ಚಿದಾನಂದ, ಮೂರ್ತಿ, ರತ್ನ, ಲಕ್ಷ್ಮಣಗೌಡ.ಬೆಟ್ಟಗೆರೆಮಂಜುನಾಥ. ಸೇರಿದಂತೆ ಹಲವರಿದ್ದರು.

