AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿ ಅವರನ್ನು ಭೇಟಿ ಮಾಡಿದರು #avintvcom

1 min read

[10:47 pm, 05/12/2020] Sharma Avin Tv: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅವರನ್ನು ಭೇಟಿ ಮಾಡಿದರು.

ಭೇಟಿಯ ಸಮಯದಲ್ಲಿ ಭದ್ರಾ ಜಲಾಶಯದಿಂದ ಕಾಲುವೆ ಹಾಗೂ ನಾಲೆಗಳಿಗೆ ನೀರು ಹರಿಸುವುದನ್ನು ಈಗಾಗಲೇ ನಿಲ್ಲಿಸಿದ್ದು, ನಾಲೆ ಹಾಗೂ ಕಾಲುವೆಗಳಲ್ಲಿ ಸಾಕಷ್ಟು ಸಿಲ್ಟ್ (ಹೂಳು) ತುಂಬಿಕೊಂಡು ಅಚ್ಚುಕಟ್ಟು ಭಾಗದ ಕೊನೆಯ ಭಾಗದ ರೈತರಿಗೆ ನೀರು ತಲುಪದೇ ಅನಾನುಕೂಲವಾಗಿದ್ದು, ಸೂಕ್ತ ರೀತಿಯಲ್ಲಿ ಬೆಳೆ ಬೆಳೆಯಲು ಸಮಸ್ಯೆಯಾಗಿ, ರೈತರು ಆರ್ಥಿಕವಾಗಿ ಸಬಲರಾಗಲು ಹಿನ್ನಡೆಯುಂಟಾಗಿದ್ದು, ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳು ತೆಗೆಯುವ ಕಾಮಗಾರಿ ಕೈಗೆತ್ತಿಕೊಂಡು ನಾಲೆ ಹಾಗೂ ಕಾಲುವೆ ಗಳಲ್ಲಿ ತುಂಬಿಕೊಂಡಿರುವ ಹೂಳು ತಗೆಸಿ ಕೊಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾ ಪಂಚಾಯತ್ ಸಿ.ಇ.ಓ ವೈಶಾಲಿ ಅವರು, ನಿಮ್ಮ ಮನವಿಯನ್ನು ಪುರಸ್ಕರಿಸುತ್ತೇನೆ, ಅತೀ ಶೀಘ್ರವಾಗಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದರು.

[10:47 pm, 05/12/2020] Sharma Avin Tv: 3.ದಿನಾಂಕ 05/12/2020 ರಂದು, ಭದ್ರಾವತಿ ತಾಲೂಕು ಬಾಬಳ್ಳಿ ನೀರು ಬಳಕೆದಾರರ ಸಹಕಾರ ಸಂಘದ ಕಾರ್ಯದರ್ಶಿಗಳು ಕಚೇರಿಗೆ ಭೇಟಿ ನೀಡಿ ತಮ್ಮ ಗ್ರಾಮದ ರೈತರ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಂಘಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author