ಆವತಿ ಕಾಫಿ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ….
1 min read
ಆವತಿ ಕಾಫಿ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಆಲ್ದೂರು: ಆವತಿಯಲ್ಲಿ ನಡೆಯುತ್ತಿರುವ ಕಾಫಿ ಕಪ್ ಕ್ರಿಕೆಟ್ 6ನೇ ಆವೃತ್ತಿಯ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಕೆರೆಮಕ್ಕಿ ಮಹೇಶ್,ಸರ್ಕಾರಿ ಶಾಲೆಗಳಲ್ಲಿಯೂ ಕೂಡ ಗುಣಮಟ್ಟದ ಶಿಕ್ಷಣ ಪ್ರತಿಭಾನ್ವಿತ ಶಿಕ್ಷಕರಿಂದ ದೊರೆಯುತ್ತಿದ್ದು, ಅದಕ್ಕೆ ಸ್ಪಷ್ಟ ನಿರ್ದರ್ಶನವಾಗಿ ಗ್ರಾಮೀಣ ಪ್ರದೇಶದ ಪ್ರೌಢಶಾಲೆಯಾದರು ವಿದ್ಯಾರ್ಥಿಗಳಾದ ನಿಶಾಂತ್, ಪ್ರಜ್ವಲ್, ಮಂಜು, ಜಾನ್ನವಿ, ಲೇಖನ್ ,ಕಾವೇರಿ, ಇಂಚರ ಯೋಗೇಶ್ ಉತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿ ಕೀರ್ತಿ ತಂದಿದ್ದಾರೆ ಅವರ ಈ ಸಾಧನೆಗೆ ಪ್ರೇರಣೆ ಮಾರ್ಗದರ್ಶನ ಮಾಡಿದ ಶಿಕ್ಷಕರ ಪರಿಶ್ರಮ ಶ್ಲಾಘನೀಯ ಎಂದು ಅಭಿನಂದಿಸಿ ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಹುದ್ದೆಗಳಲ್ಲಿರುವ ಬಹುಪಾಲು ನೌಕರರು ಸರ್ಕಾರಿ ಶಾಲೆಗಳಲ್ಲಿ ಕಲಿತವರೇ ಆಗಿದ್ದರು ಅವರ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ ಮಕ್ಕಳನ್ನು ಖಾಸಗಿ ಶಾಲೆಯ ವ್ಯಾಮೋಹದಿಂದ ಬಹುಸಂಖ್ಯೆಯ ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುತ್ತಿಲ್ಲ ಇದರಿಂದ ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚಲ್ಪಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಆವತಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಬಿ ಆರ್ ಪ್ರಕಾಶ್, ಶ್ರೀಧರ್, ಶ್ರೀನಿಧಿ, ಶರಣ್, ಪವನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ನಿರತ ಹರೀಶ್ ,ಮುತ್ತು, ರವಿಪ್ರಸಾದ್ ಲೋಹಿತ್ ಕ್ರೀಡಾಪಟುಗಳು ಹಾಜರಿದ್ದರು.

