लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

1 min read

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

‎ನಾನು ಚಿಕ್ಕ

ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು,

ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು……

‎ಆದರೆ,

‎ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,…..

‎

‎ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು,

‎ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,……

‎

‎ಆದರೆ,

‎ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು,

‎ನೀನು ದಡ್ಡ – ಅಯೋಗ್ಯ,

‎ಎದೆ ಸೀಳಿದರೂ ನಾಲ್ಕಕ್ಷರ ಬರೆಯಲು ಸರಿಯಾಗಿ ಬರುವುದಿಲ್ಲ,……

‎

‎ಮನೆಯಲ್ಲಿ ನಾನು ಆಗಾಗ ಸಿನಿಮಾ ಹಾಡುಗಳನ್ನು ಹಾಡುತ್ತಿದ್ದರೆ, ನನ್ನ ಅಜ್ಜಿ

‎ನನ್ನ ಮೊಮ್ಮಗ ಥೇಟ್

‎ಎಸ್. ಪಿ. ಬಾಲಸುಬ್ರಮಣ್ಯಂರಂತೆ ಹಾಡುತ್ತಾನೆ ಎನ್ನುತ್ತಿದ್ದರು,….

‎

‎ಆದರೆ,

‎ಅದೇ ಹಾಡನ್ನು ಸ್ನೇಹಿತರ ಮುಂದೆ ಹಾಡಿದರೆ ಏಯ್ ನಿಲ್ಸೋ, ಕತ್ತೆ ಕೂಗಿದರೂ ಇದಕ್ಕಿಂತ ಮಧುರವಾಗಿರುತ್ತದೆ ಎನ್ನುತ್ತಿದ್ದರು,……

‎

‎ಮನೆಯಲ್ಲಿ ನಡೆದ ಘಟನೆಗಳನ್ನು ನಾನು ನೋಡಿದ ರೀತಿಯಲ್ಲಿಯೇ ಸತ್ಯವಾಗಿ ಹೇಳಿದಾಗ  ಅಜ್ಜ ನನ್ನ ಮೊಮ್ಮಗ ಸತ್ಯ ಹರಿಶ್ಚಂದ್ರ ಎನ್ನುತ್ತಿದ್ದರು,…….

‎

‎ಆದರೆ,

‎ಅದೇ ರೀತಿ ಆಟದ ಮೈದಾನದಲ್ಲಿ ನಡೆದ ಹೊಡೆದಾಟಗಳನ್ನು ಪ್ರಿನ್ಸಿಪಾಲರ ಬಳಿ ಅಷ್ಟು ಸತ್ಯವಾಗಿ ಹೇಳಿದಾಗ ನನ್ನ ಜೊತೆಗಾರರು ಇವನೊಬ್ಬ ದಗಲ್ಬಾಜಿ – ನಂ‌ಬಿಕೆ ದ್ರೋಹಿ – ಪಿಂಪ್ ನನ್ಮಗ ಗುರು ಎನ್ನುತ್ತಿದ್ದರು,…….

‎

‎ಕಾಲೇಜಿನ ನಾಟಕದಲ್ಲಿ ಹೆಣ್ಣು ಪಾತ್ರ ಮಾಡಿ ಪ್ರಥಮ ಬಹುಮಾನ ಗಳಿಸಿದಾಗ ತೀರ್ಪುಗಾರರು ಅದ್ಭುತ ನಟ ಎಂದರು,……

‎

‎ಆದರೆ,

‎ನನ್ನ ಸಹಪಾಠಿಗಳು ಇವನೊಬ್ಬ ಚಕ್ಕಾ – ಹೆಣ್ಣಿಗ – ದ್ವಿಲಿಂಗಿ ಎಂದು ಜರಿದರು,…….

‎

‎ಲಂಚಕೊಟ್ಟು ಕೆಲಸಕ್ಕೆ ಸೇರುವುದಿಲ್ಲ ಎಂದು ಪ್ರಾಮಾಣಿಕವಾಗಿ ವರ್ಷಗಟ್ಟಲೆ ಅಲೆಯುವಾಗ ನನ್ನ ಸುತ್ತಲಿನವರು ಬಫೂನ್ ನಂತೆ ನೋಡಿದರು,……..

‎

‎ಆದರೆ,

‎ಲಂಚಕೊಟ್ಟು ಒಳ್ಳೆಯ ಕೆಲಸಕ್ಕೆ ಸೇರಿದಾಗ ಅದೇ ಜನ ಶಹಬಾಸ್ ಎಂದರು……..

‎

‎ವರದಕ್ಷಿಣೆ ಇಲ್ಲದೆ ಮದುವೆಯಾಗುತ್ತೇನೆ ಎಂದಾಗ ಸಂಬಂಧಿಕರು ಇವನಿಗೇನೋ ಐಬು ಎಂದು ಹೆಣ್ಣು ಕೊಡಲು ನಿರಾಕರಿಸಿದರು,…….

‎

‎ಆದರೆ,

‎ಇಷ್ಟಿಷ್ಟು ಹಣ, ಒಡವೆ, ಸೈಟು ಬೇಕು ಎಂದು ಬೇಡಿಕೆ ಇಟ್ಟಾಗ ಅದನ್ನೆಲ್ಲಾ ನೀಡಿ ಭರ್ಜರಿಯಾಗಿ ಮದುವೆಮಾಡಿಕೊಟ್ಟರು……

‎

‎ಆಫೀಸಿನಲ್ಲಿ ಎಲ್ಲರೂ ನನ್ನನ್ನು ಬುದ್ದಿವಂತ – ಶ್ರಮಜೀವಿ ಎಂದು ಹೊಗಳುವರು,…..

‎

‎ಆದರೆ,

‎ನನ್ನ ಪತ್ನಿ ಮನೆಯಲ್ಲಿ ನನ್ನನ್ನು ಸಾಮಾನ್ಯ ಜ್ಞಾನ ಇಲ್ಲದ  ಪೆದ್ದ – ಸೋಂಬೇರಿ ಎಂದು ಹಿಯಾಳಿಸುವಳು,…….

‎

‎ನಿನ್ನನ್ನು ಕಟ್ಟಿಕೊಂಡ ನಾನು ದುರಾದೃಷ್ಟವಂತಳು. ಒಂದು ಸ್ವಲ್ಪವೂ ರಸಿಕತೆಯಿಲ್ಲ ಎಂದು ಮನೆಯಲ್ಲಿ ಪತ್ನಿ ಕೊರಗುವಳು,…..

‎

‎ಆದರೆ,

‎ನನ್ನ ಮಾತಿನ ಮೋಡಿ, ಜೋಕ್ ಗಳಿಗೆ ಸಂತೋಷಪಡುವ ನನ್ನ ಸಹೋದ್ಯೋಗಿಗಳು ನಿನ್ನನ್ನು ಪಡೆದ ನಿನ್ನ ಹೆಂಡತಿ ಅದೃಷ್ಟವಂತಳು ಎನ್ನುವರು,……

‎

‎ಒಂದು ಸಣ್ಣ ಸಹಾಯಕ್ಕಾಗಿ ಪಕ್ಕದ ಮನೆಯವರು ನನ್ನನ್ನು ದೇವರಂತಾ ಮನುಷ್ಯ ಎನ್ನುವರು,…..

‎

‎ಆದರೆ,

‎ಒಂದು ಸಣ್ಣ ಜಗಳದಿಂದ ಎದುರು ಮನೆಯವರು ಇವನೊಬ್ಬ ಖದೀಮ, ನಯ ವಂಚಕ ಎನ್ನುವರು……

‎

‎ಯಪ್ಪಾ, ………….

‎

‎ಇವುಗಳ ಮಧ್ಯೆ ನನಗೆ ನಾನು ಯಾರೆಂದು ನನಗೇ ಅರಿವಾಗುತ್ತಿಲ್ಲ. ಅದರ ನಿರಂತರ ಹುಡುಕಾಟದಲ್ಲಿ ನಾನು…………….

‎

‎ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ,

‎ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,

‎ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,

‎ಮನಸ್ಸುಗಳ ಅಂತರಂಗದ ಚಳವಳಿ,

‎ವಿವೇಕಾನಂದ. ಎಚ್. ಕೆ.

‎9844013068……..

9663750451……

<span;>‎

About Author

Leave a Reply

Your email address will not be published. Required fields are marked *

You may have missed