लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕತೆಗೆ ಶಕ್ತಿ ತುಂಬಿವೆ ‎….

1 min read

‎ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕತೆಗೆ ಶಕ್ತಿ ತುಂಬಿವೆ
‎
‎ಚಿಕ್ಕಮಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಗೆ ಮತ್ತು ಬಡ ಕುಟುಂಬಗಳ ಜೀವನ ಮಟ್ಟ ಸುಧಾರಣೆಗೆ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪರೋಕ್ಷವಾಗಿ ಶಕ್ತಿ ತುಂಬಿದೆ. ರಾಜ್ಯದ ಜಿ.ಡಿ.ಪಿ.ಹೆಚ್ಚಳವಾಗಿದ್ದು, ಜನರ ಜೀವನಮಟ್ಟ ಸುಧಾರಣೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಅಭಿಮತ ವ್ಯಕ್ತಪಡಿಸಿದರು.
‎
‎ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‎
‎ಶೇ.99 ರಷ್ಟು ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರಕಿದೆ. ಒಂದೆರಡು ಪ್ರಕರಣಗಳನ್ನು ಹಿಡಿದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು ಮೊದಲು ಫಲಾನುಭವಿಗಳ ಪಟ್ಟಿ ಪರಿಶೀಲಿಸಬೇಕು. ಯೋಜನೆಗಳ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿನಾಕಾರಣ ಯೋಜನೆಗಳನ್ನು ದೂಷಿಸಬಾರದು ಎಂದರು.
‎
‎ಜೂನ್ ತಿಂಗಳಿನಿಂದ ಶಾಲಾ-ಕಾಲೇಜುಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ
‎ಸಂಚರಿಸಲು ಯಾವುದೇ ಸಮಸ್ಯೆ ಉಂಟಾಗದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ನಿಗದಿತ ಸಮಯದಲ್ಲಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
‎
‎ಜಿಲ್ಲೆಯ ಕೆಲವು ಗ್ರಾಮೀಣ ಭಾಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಕೆಟ್ಟು ನಿಲ್ಲುತ್ತಿದ್ದು, ಇದರಿಂದ ಪ್ರಯಾಣಿಕರ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಕೆಲವು ಕಡೆ ಮಹಿಳೆಯರು ತಂಗುದಾಣಗಳ ಬಳಿ ಇದ್ದರೂ ಕೂಡ ಬಸ್ ನಿಲ್ಲಿಸದೆ ವಾಹನ ಚಾಲಕರು ತೆರಳುತ್ತಿರುವ ದೂರುಗಳು ಕೇಳಿ ಬರುತ್ತಿದ್ದು, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದರು.
‎
‎ಅನ್ನಭಾಗ್ಯ ಯೋಜನೆಯಡಿ ಕುಟುಂಬಸ್ಥರು ಆತಂಕಪಡುವ ಅಗತ್ಯವಿಲ್ಲ, ಮೇ ಮತ್ತು ಜೂನ್ ತಿಂಗಳ ಪಡಿತರವನ್ನು ಜೂನ್ ತಿಂಗಳಲ್ಲಿ ಒಟ್ಟಿಗೆ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
‎
‎ಗೃಹಲಕ್ಷ್ಮೀ ಯೋಜನೆಯಡಿ 2,62,880 ಫಲಾನುಭವೆಗಳಿಗೆ ಫೆಬ್ರವರಿ ಮಾಹೆಯ ಅಂತ್ಯಕ್ಕೆ 52,57,60,000 ರೂ.ಗಳನ್ನು ಅವರ ಖಾತೆಗೆ ಜಮಾ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯ 2,72,403 ಯಜಮಾನಿಯರಿಗೆ 29 ಕಂತುಗಳ ಮೂಲಕ 1477 ಕೋಟಿ, ಗೃಹಜ್ಯೋತಿ ಯೋಜನೆಯಡಿ 3,12,925 10 ಲಕ್ಷ ಫಲಾನುಭವಿಗಳ ಪರವಾಗಿ ಸರ್ಕಾರ 365 ಕೋಟಿ ರೂ.ಗಳನ್ನು ಭರಿಸಿದೆ. ಅನ್ನಭಾಗ್ಯ ಯೋಜನೆಯಡಿ 8,22,763 ಫಲಾನುಭವಿಗಳಿಗೆ ನೇರ ನಗದು ಹಾಗೂ ಅಕ್ಕಿಯ ಮೂಲಕ 360 ಕೋಟಿ ರೂ. ನೀಡಿದ್ದರೆ, ಶಕ್ತಿ ಯೋಜನೆಯಡಿ ಚಿಕ್ಕಮಗಳೂರು ವಿಭಾಗದ ಬಸ್‌ಗಳಲ್ಲಿ 6.26 ಕೋಟಿ ಟ್ರಿಪ್‌ ಗಳ ಮೂಲಕ ಮಹಿಳೆಯರು ಓಡಾಡಿದ್ದು, ಇದಕ್ಕಾಗಿ ಸರ್ಕಾರ 247 ಕೋಟಿ ರೂ.ಗಳನ್ನು ಮತ್ತು ಯುವನಿಧಿ ಯೋಜನೆಯಡಿ ಜಿಲ್ಲೆಯ 49 ಸಾವಿರ ನಿರುದ್ಯೋಗಿ ಪದವಿ ಮತ್ತು ಡಿಪ್ಲೊಮಾ ಪದವೀಧರರಿಗೆ 15 ಕೋಟಿ (ಕ್ರಮವಾಗಿ ಮಾಸಿಕ 3 ಸಾವಿರ ಹಾಗೂ 1,500 ರಂತೆ) ರೂ.ಗಳನ್ನು ನೀಡಲಾಗಿದೆ. ಒಟ್ಟಾರೆ ಜಿಲ್ಲೆಯ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಈ ಪಂಚ ಗ್ಯಾರಂಟಿಗಳಿಂದ 2,465 ಕೋಟಿ ರೂ.ಗಳನ್ನು ಸರ್ಕಾರ ಕೊಡ ಮಾಡಿದೆ ಎಂದು
‎
‎ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಎಸ್.ಎನ್.ಮಂಜುನಾಥ್, ಸಮೀವುಲ್ಲಾ, ಹೆಚ್.ಎಸ್.ಕೃಷ್ಣಗೌಡ, ಚಂದ್ರಮೌಳಿ, ಹೇಮಾವತಿ, ಜಿ.ಪಂ. ಉಪ ಕಾರ್ಯದರ್ಶಿ ಗೌರವ್ ಕುಮಾರ್‌ ಶೆಟ್ಟಿ ಹಾಗೂ ವಿವಿಧ ತಾಲ್ಲೂಕು ಅಧ್ಯಕ್ಷರುಗಳು, ಮತ್ತು ಸದಸ್ಯರುಗಳು, ಹಾಗೂ ಪಂಚ ಗ್ಯಾರಂಟಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

You may have missed