ಆಲ್ಲೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಪಡಿತರ ಚೀಟಿಗಳಿದ್ದು, ಒಂದೇ ಕೇಂದ್ರದ ಮೂಲಕ ಪಡಿತರ ವಿತರಣೆ ನಡೆಯುತ್ತಿರುವುದರಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
1 min read
ಆಲ್ಲೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಪಡಿತರ ಚೀಟಿಗಳಿದ್ದು, ಒಂದೇ ಕೇಂದ್ರದ ಮೂಲಕ ಪಡಿತರ ವಿತರಣೆ ನಡೆಯುತ್ತಿರುವುದರಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ವರ್ ಸಮಸ್ಯೆ ಮತ್ತು ಅವ್ಯವಸ್ಥಿತ ನಿರ್ವಹಣೆಯಿಂದ ಕೂಲಿ ಕಾರ್ಮಿಕರು ತಮ್ಮ ದಿನನಿತ್ಯದ ಕೆಲಸವನ್ನು ಬಿಟ್ಟು ಹಲವು ದಿನಗಳಿಂದ ಪಡಿತರಕ್ಕಾಗಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೂ ಕಾಯುತ್ತಿದ್ದರೂ ಹಲವರಿಗೆ ಪಡಿತರ ದೊರೆಯುತ್ತಿಲ್ಲ. ಇದರಿಂದ ಬಡ ಮತ್ತು ದುಡಿಯುವ ವರ್ಗದ ಜನರ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ.
ಜನರ ಮೂಲಭೂತ ಹಕ್ಕಾದ ಪಡಿತರ ವಿತರಣೆಯಲ್ಲಿ
ಇಂತಹ ನಿರ್ಲಕ್ಷ್ಯ ಅಕ್ಷಮ್ಯ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಆಲ್ಲೂರು ವ್ಯಾಪ್ತಿಯ ಪಡಿತರ ವಿತರಣೆಯನ್ನು ಕನಿಷ್ಠ 4 ಸೊಸೈಟಿಗಳಾಗಿ ವಿಂಗಡಿಸಿ, ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಬರುವ ತಿಂಗಳೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ, ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಪ್ರಬಲ ಜನಾಂದೋಲನ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ. ಜನರ ಸಂಕಷ್ಟದ ಬಗ್ಗೆ ಸರ್ಕಾರ ಮೌನ ವಹಿಸಿದರೆ, ಹೋರಾಟದ ಮೂಲಕವೇ ಉತ್ತರ ನೀಡಬೇಕಾದ ಪರಿಸ್ಥಿತಿ ಎದುರಾಗಲಿದೆ.
ಮುಸ್ತಫ ಆಲ್ಲೂರು SDPI ಜಿಲ್ಲಾ ಅಧ್ಯಕ್ಷರು ಚಿಕ್ಕಮಗಳೂರು

