लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮನೆ ಮನೆಗೆ ತಲುಪಿಸಲು ಆಮ್ ಆದ್ಮಿ ಪಕ್ಷದಿಂದ ಗೊರಕೆ ಸಾಕು ಪೊರಕೆ ಬೇಕು ಬೃಹತ್ ಅಭಿಯಾನಕ್ಕೆ ಚಾಲನೆ#avintvcom

1 min read
Featured Video Play Icon

ಹಿಂದಿನ ಸರಕಾರಗಳ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಲು ಆಮ್‌ ಆದ್ಮಿ ಪಕ್ಷದಿಂದ ಗೊರಕೆ ಸಾಕು ಪೊರಕೆ ಬೇಕು ಬೃಹತ್‌ ಅಭಿಯಾನಕ್ಕೆ ಚಾಲನೆ

ಈ ಭಾರಿ ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತ- ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ವಿಶ್ವಾಸ

ಬೆಂಗಳೂರು ಡಿಸೆಂಬರ್‌ 06: ಆಮ್‌ ಆದ್ಮಿ ಪಕ್ಷದಿಂದ ಬಿಬಿಎಂಪಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಗೊರಕೆ ಸಾಕು ಪೊರಕೆ ಬೇಕು ಬೃಹತ್‌ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಮಂಜುನಾಥ ನಗರದ ನಿವಾಸಿಗಳಿಗೆ ಪಕ್ಷದ ಬಾವುಟ ನೀಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರಿನ ಜನತೆ ಮೂರು ಪಕ್ಷಗಳ ಕೆಟ್ಟ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಆದ ಕಾರಣ ಬಿಬಿಎಂಪಿಯ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಅಭಿಯಾನವನ್ನು ಪ್ರತಿ ವಾರ ಮಾಡಲಿದ್ದೇವೆ. ಈ ಬಾರಿ ಬಿಬಿಎಂಪಿಯ ಚುನಾವಣೆಯಲ್ಲಿ ನಾವು ಬಹುಮತಗಳಿಸಲಿದ್ದೇವೆ ಎಂದು ಹೇಳಿದರು.

ವರನಟ ರಾಜ್‌ಕುಮಾರ್ ಅವರ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ “ಮನೆ, ಮನೆ ಆಮ್ ಆದ್ಮಿ” ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ಶೇ 70 ರಷ್ಟು ಬೆಂಗಳೂರಿನ ಜನತೆ ಬೆಂಗಳೂರಿನಲ್ಲೂ ದೆಹಲಿ ಮಾದರಿ ಆಮ್ ಆದ್ಮಿ ಪಕ್ಷದ ಸರ್ಕಾರ ಇರಬೇಕು ಎಂದು ತಿಳಿಸಿದ್ದಾರೆ. ಈ ನಂಬಿಕೆಯನ್ನು ನಾವು ಅಧಿಕಾರಕ್ಕೆ ಬಂದರೆ ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಈ ಅಭಿಯಾನದ ಮೂಲಕ ಬೆಂಗಳೂರಿನ ಪ್ರತಿ ನಾಗರಿಕರ ಮನೆಗೆ ಭೇಟಿ ನೀಡಿ ಸರ್ಕಾರದ ಹಾಗೂ ಬಿಬಿಎಂಪಿಯ ವೈಫಲ್ಯ ಗಳನ್ನು ತಿಳಿಸಲಾಗುವುದು. ಮೂರ ಪಕ್ಷಗಳಿಗಿಂತ ಆಮ್ ಆದ್ಮಿ ಪಕ್ಷ ಹೇಗೆ ಭಿನ್ನ ಎಂದು ಮನವರಿಕೆ ಮಾಡಿಕೊಡಲಾಗುವುದು ಎಂದರು.

ಅಭಿಯಾನದಲ್ಲಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಸಹ ಸಂಚಾಲಕಿ ಶಾಂತಲಾ ದಾಮ್ಲೆ, ಉಪಾಧ್ಯಕ್ಷ ಸುರೇಶ್‌ ರಾಥೋಡ್‌,  ಕಾರ್ಯದರ್ಶಿ ಸಂಚಿತ್ ಸಹಾನಿ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ರಾಜಾಜಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಗುರುಮೂರ್ತಿ, ಮಂಜುನಾಥ್ ನಗರ ವಾರ್ಡ್ ಅಧ್ಯಕ್ಷ ಬಾಲಕೃಷ್ಣೇಗೌಡ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಫಣಿರಾಜ್.ಎಸ್.ವಿ. ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author