.S. ಶಾಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾಗೃತಿ ರ್ಯಾಲಿಯನ್ನು ನಡೆಸಿದರು….
1 min read
05-06-2026 ರಂದು J.S. ಶಾಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾಗೃತಿ ರ್ಯಾಲಿಯನ್ನು ನಡೆಸಿದರು
. ರ್ಯಾಲಿ ಕಾರ್ಯಕ್ರಮವು ಶಾಲೆಯ ಆವರಣದಿಂದ ಪ್ರಾರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು. ರ್ಯಾಲಿಯಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಗಿಡ ನೆಡುವ ಮಹತ್ವ, ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಕುರಿತು ಘೋಷಣೆಗಳನ್ನು ಕೂಗಿದರು.
J.S. ಶಾಲೆಯ ಶಿಕ್ಷಕರ ಹಾಗೂ ಸಿಬ್ಬಂದಿ ವರ್ಗದ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡಲಾಯಿತು. ಪರಿಸರ ದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಶ್ರೀಯುತ ರಿಜ್ವನ್ ಆಲಿ ನ್ಯಾಯಾಧೀಶರು, ಅಶ್ವಥ್ ಡಿ. ವೈ. ಎಫ್. ನಿವ್ರತ್ತ ಸಿ. ಆರ್. ಪಿ ಯಾವರಾದ ಶ್ರೀಯುತ ಜನಪ್ಪ ರವರು ಹಾಗೂ ಜೆ ಎಸ್. ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀಯುತ ಇಮ್ರಾನ್ ಸಾರ್ ರವರು ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

