लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

‎ಜೂ.7 ಕ್ಕೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
‎
‎ಚಿಕ್ಕಮಗಳೂರು: ನಗರದ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಜೂ. 7 ರಂದು ಬೆಳಗ್ಗೆ 11 ಕ್ಕೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾಲಯದ ಸಂಚಾಲಕರಾದ ಭಾಗ್ಯಕ್ಕ ತಿಳಿಸಿದರು.
‎
‎ನಗರದ ಪ್ರೆಸ್‌ಕ್ಲಬ್‌ನಲ್ಲಿಂದು ಕರೆದಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗವಾದ ರಾಜಯೋಗ ಎಜುಕೇಶನ್ ರಿಸರ್ಚ್ ಫೌಂಡೇನ್ ವತಿಯಿಂದ ಕಳೆದ 10 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
‎
‎ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿ ಶಾಲೆಯ ಇಬ್ಬರು ಸಾಧಕ ವಿದ್ಯಾರ್ಥಿಗಳಿಗೆ ಜ್ಞಾನಜ್ಯೋತಿ ಪ್ರಶಸ್ತಿ, ಪಿಯುಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿ ಕಾಲೇಜಿನ ಕಲಾ, ಮತ್ತು ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳ ತಲಾ ຈ ರಿಗೆ ಜ್ಞಾನ ರತ್ನ, ಶೇ.100 ಫಲಿತಾಂಶ
‎
‎ದಾಖಲಿಸಿದ ತಾಲ್ಲೂಕಿನ ಪ್ರತಿಯೊಂದು ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜ್ಞಾನ ದೀಪ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
‎
<span;>‎ಈ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಶಿಕ್ಷಣ ಪ್ರಮುಖ ಘಟ್ಟವಾಗಿದ್ದು, ಈ ಪರೀಕ್ಷೆಗಳಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನನ್ನು ಪ್ರೋತ್ಸಾಹಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆಂದು ಹೇಳಿದ ಅವರು ಈ ಮೂಲಕ ಇತರ ವಿದ್ಯಾರ್ಥಿಗಳು ಸ್ಫೂರ್ತಿ ಪಡೆದು ಸಾಧನೆ ಮಾಡಲು ಪ್ರೇರೇಪಿಸುವುದು ನಮ್ಮ ಮುಖ್ಯ ಉದ್ದೇಶ ಎಂದು ಹೇಳಿದರು.
‎
‎ಚಿಕ್ಕಮಗಳೂರು ತಾಲ್ಲೂಕಿನ ಪ್ರತಿ ಶಾಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಾತಿ ಮತ ಧರ್ಮಗಳ ಯಾವುದೇ ಬೇಧವಿಲ್ಲದೆ ವಿದ್ಯಾರ್ಥಿಗಳ ಯೋಗ್ಯತೆ ಮತ್ತು ಮೌಲ್ಯಗಳನ್ನು ಮುಕ್ತವಾಗಿ ಗುರುತಿಸಿ ಗೌರವಿಸುವ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದ ಅವರು ಈ ಸನ್ಮಾನವನ್ನು ಪೋಷಕರು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಜ್ಞಾನ ದಾಸೋಹದೊಂದಿಗೆ ಬ್ರಹ್ಮಬೋಜನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
<span;>‎
<span;>‎ಗೋಷ್ಟಿಯಲ್ಲಿ ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ನಂದ ಕುಮಾರ್, ಕವಿತಾ, ಮೀನಾಕ್ಷಿ, ಗಂಗಾಧರ್ ಇದ್ದರು.

About Author

Leave a Reply

Your email address will not be published. Required fields are marked *

You may have missed