ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರವಾಹ, ಭೂಕುಸಿತ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದು-ರಿಸುವ ನಿಟ್ಟಿನಲ್ಲಿ ಬಣಕಲ್ ಪೊಲೀಸ್ ಠಾಣೆಯಲ್ಲಿ ವಿಪತ್ತು ನಿರ್ವಹಣಾ ಪೂರ್ವ ಸಿದ್ಧತಾ ಸಭೆ ನಡೆಯಿತು…
1 min read
ಕೊಟ್ಟಿಗೆಹಾರ : ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರವಾಹ, ಭೂಕುಸಿತ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದು-ರಿಸುವ ನಿಟ್ಟಿನಲ್ಲಿ ಬಣಕಲ್ ಪೊಲೀಸ್ ಠಾಣೆಯಲ್ಲಿ ವಿಪತ್ತು ನಿರ್ವಹಣಾ ಪೂರ್ವ ಸಿದ್ಧತಾ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬಣಕಲ್ ಪಿಎಸ್‌ಐ ದಿಲೀಪ್ ಕುಮಾರ್ ಮಾತನಾಡಿ, ವಿಪತ್ತು ಸಂಭವಿಸಿದ ಬಳಿಕ ಕ್ರಮ ಕೈಗೊಳ್ಳುವುದಕ್ಕಿಂತ ಮುನ್ನೆಚ್ಚ ರಿಕೆ ವಹಿಸುವುದು ಅತ್ಯಂತ ಮುಖ್ಯ. ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ತಕ್ಷಣ ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಲಾಖೆಗಳು, ಸ್ಥಳೀಯ ಸ್ವಯಂಸೇವಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ? ಎಂದು ಹೇಳಿದರು.
ತುರ್ತು ಸಂದರ್ಭಗಳಲ್ಲಿ ಮಾಹಿತಿ ವಿನಿಮಯ, ರಕ್ಷಣಾ ಕಾರ್ಯಾಚರಣೆಗಳ ಸಮನ್ವಯ ಹಾಗೂ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ವಿಶೇಷ ವಾಟ್ಸಾಪ್ ಗ್ರೂಪ್ ರಚಿಸಲಾಗಿದೆ. ಈ ಮೂಲಕ ಪೊಲೀಸ್ ಇಲಾಖೆ, ವಿಪತ್ತು ನಿರ್ವಹಣಾ ತಂಡ, ವಿವಿಧ ಇಲಾಖೆಗಳು ಹಾಗೂ ಗ್ರಾಮಸ್ಥರ ನಡುವೆ ನಿರಂತರ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಪ್ರವಾಹ, ಭೂಕುಸಿತ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ನಡುವಿನ ಸಮನ್ವಯ, ರಕ್ಷಣಾ ಕಾರ್ಯಾಚರಣೆಗಳ ರೂಪರೇಷೆ, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಹಾಗೂ ಪರಿಹಾರ ಕೇಂದ್ರಗಳಲ್ಲಿ ಜನಸಂದಣಿ ನಿರ್ವಹಣೆ ಕುರಿತಂತೆ ಸಮಗ್ರ ಚರ್ಚೆ ನಡೆಯಿತು.
ವಿಪತ್ತು ಸಾಮಾಜಿಕ ಕಾರ್ಯಕರ್ತ ಸಂ-ಜಯ್ ಮಾತನಾಡಿ, ನಿರ್ವಹಣೆ ಕೇವಲ ಜವಾಬ್ದಾರಿಯಲ್ಲ. ಇಲಾಖೆಗಳ ಸಾರ್ವಜನಿಕರು, ಯುವಕರು ಹಾಗೂ ಸ್ವಯಂಸೇವಕರು ಸಹ ಜವಾಬ್ದಾ-ರಿಯುತವಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ವಿಪತ್ತು ಸಂದರ್ಭಗಳಲ್ಲಿ ಹೆಚ್ಚಿನ ಅನಾಹುತಗಳನ್ನು ತಡೆಯಬಹುದು. ಪೊಲೀಸ್ ಇಲಾಖೆ ಕೈಗೊಂಡಿರುವ ಈ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ವಾಟ್ಸಾಪ್ ಸಮನ್ವಯ ವ್ಯವಸ್ಥೆ ಪರಿಣಾಮಕಾರಿ ಕಾರ್ಯಾಚರಣೆಗೆ ನೆರವಾಗಲಿವೆ? ಎಂದು ಹೇಳಿದರು.
ಸಭೆಯಲ್ಲಿ ಬಣಕಲ್ ಹಾಗೂ ಕೊಟ್ಟಿಗೆಹಾರ ಭಾಗದ ಗ್ರಾಮಸ್ಥರು, ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಜಯ್ ಕೊಟ್ಟಿಗೆಹಾರ. ಆರೀಫ್, ರವಿ, ಅಭಿ, ಅಜಿತ್, ವಿನಯ್, ವೆಂಕಟೇಶ್, ಪ್ರದೀಪ್, ಜಗದೀಶ್, ಸಂತೋಷ್ ಸೇರಿದಂತೆ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತ-ರಿದ್ದರು.

