लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಎಸಿಎಫ್ ಮನೆ ಮೇಲೆ ಲೋಕಾಯುಕ್ತ ದಾಳಿ
‎ಚಿಕ್ಕಮಗಳೂರು: ಅಸಿಸ್ಟೆಂಟ್ ಕನ್ಸರ್ವೆಟರ್ ಆಫ್ ಫಾರೆಸ್ಟ್
‎(ACF) ಆಗಿ ಸೇವೆ ಸಲ್ಲಿಸುತ್ತಿರುವ ಮೋಹನ್ ಅವರಿಗೆ ಸೇರಿದ ನಿವಾಸ ಹಾಗೂ ಇತರ ಪ್ರಮುಖ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ್ದಾರೆ.
‎ಅಧಿಕಾರ ದುರುಪಯೋಗಪಡಿಸಿಕೊಂಡು ಮಿತಿಮೀರಿದ ಆಸ್ತಿ ಗಳಿಕೆ ಮಾಡಿರುವ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಹಠಾತ್ ಕಾರ್ಯಾಚರಣೆ ನಡೆಸಲಾಗಿದೆ. ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಅಧಿಕಾರಿ ಮೋಹನ್ ಅವರ ಸ್ವಗೃಹ ಹಾಗೂ ಕಡೂರಿನಲ್ಲಿರುವ ಅವರ ಸಹೋದರಿಯ ಮನೆ ಮೇಲೆಯೂ ಅಧಿಕಾರಿಗಳ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕೈಗೊಂಡಿವೆ.
‎
ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದ ಸಿಬ್ಬಂದಿ ಈ ಬೃಹತ್ ಕಾರ್ಯಾಚರಣೆಯಲ್ಲಿ ನಿರತವಾಗಿದ್ದು, ಪ್ರಮುಖ ದಾಖಲೆ ಪತ್ರಗಳು ಮತ್ತು ಆಸ್ತಿ ವಿವರಗಳ ಪರಿಶೀಲನೆ ಮುಂದುವರಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed