लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಶಿಸ್ತು ಕ್ರಮಕ್ಕೆ ಡಿ.ಸಿ.ಗೆ ಮನವಿ….

1 min read

ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಶಿಸ್ತು ಕ್ರಮಕ್ಕೆ ಡಿ.ಸಿ.ಗೆ ಮನವಿ

ಚಿಕ್ಕಮಗಳೂರು: ಗ್ರಾಮದಲ್ಲಿ ಹೆಚ್ಚುತ್ತಿರುವ ಮದ್ಯದ ಹಾವಳಿ, ಅಕ್ರಮ ಮದ್ಯ ಮಾರಾಟ ಮತ್ತು ಸಾರ್ವಜನಿಕ ತೊಂದರೆಗಳ ಕುರಿತು ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಚೀರನಹಳ್ಳಿ ಮಹಿಳಾ ಸ್ವ ಸಹಾಯ ಸಂಘವು ಗುರುವಾರ ದಸಂಸ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭಂವರ್‌ಸಿಂಗ್ ಮೀನಾ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಅಜ್ಜಂಪುರ ತಾಲ್ಲೂಕಿನ ಶಿವನಿ ಹೋಬಳಿಯ ಚೀರನಹಳ್ಳಿ ಗ್ರಾಮದಲ್ಲಿ ಸುಮಾರು 300ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ.

ಈ ಪೈಕಿ 200 ಕುಟುಂಬಗಳು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಎಂದು ತಿಳಿಸಿದರು.ಗ್ರಾಮದಲ್ಲಿ ತುಂಬ ವರ್ಷಗಳಿಂದ 8-10 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ಕುಟುಂಬವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಮದ್ಯ ಸೇವನೆಯಿಂದ ಕೆಲವರು ತಮ್ಮ ಕುಟುಂಬದ ಜವಾಬ್ದಾರಿ ಮರೆತು ಕುಟುಂಬದಲ್ಲಿ ಕಲಹ, ಆರ್ಥಿಕ ಸಂಕಷ್ಟ ಹಾಗೂ ನೆಮ್ಮದಿಯಿಂದ ಜೀವಿಸಲು ಸಾಧ್ಯವಾಗುತ್ತಿಲ್ಲ ಎಂದರು.

ಗ್ರಾ.ಪಂ. ಮಾಜಿ ಸದಸ್ಯೆ ಪುಷ್ಪಾವತಿ ಮಾತನಾಡಿ ಮದ್ಯದ ಪ್ರಭಾವದಿಂದ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ, ಜಗಳ ಹಾಗೂ ಶಾಂತಿಭಂಗ ಘಟನೆಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಮಹಿಳೆ ಯರು, ಮಕ್ಕಳು, ವೃದ್ಧರು ಆತಂಕದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದರು.

ಮದ್ಯದ ದುಷ್ಪರಿಣಾಮಗಳಿಂದ ಯುವಕರ ಭವಿಷ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದ್ದು, ಗ್ರಾಮ ದಲ್ಲಿ ಆರೋಗ್ಯಕರ ಮತ್ತು ಶಾಂತಿಯುತ ವಾತಾವರಣ ಕಾಪಾಡುವುದು ಅಗತ್ಯವಾಗಿದೆ.

ಆದ್ದರಿಂದ ಜಿಲ್ಲಾಡ ಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಮಹೇಂದ್ರಸ್ವಾಮಿ, ರವಿಶಂಕರ್, ಮಹಿಳಾ ಸ್ವಸಹಾಯ ಸಂಘದ ಪುಣ್ಯವತಿ, ಯಶೋಧ, ಭಾರತಿ, ಶೋಭಾ, ಮಂಜುಳಾ ಮುಂತಾದವರು ಉಪಸ್ಥಿತರಿದರು.

About Author

Leave a Reply

Your email address will not be published. Required fields are marked *

You may have missed