लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಯೋಜನೆಯ ಕಡಿತ -ಹೊಸ ಪರಿಷ್ಕರಣೆಯಲ್ಲ
ಚಿಕ್ಕಮಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ
ಗೃಹಜ್ಯೋತಿ’ ಯೋಜನೆಯ ಪರಿಷ್ಕರಣೆ ಕುರಿತಾಗಿ ಎದ್ದಿರುವ ಗೊಂದಲಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಚಿಕ್ಕಮಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.
‎ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಣೆ ಮಾಡಲು ಮುಂದಾಗಿಲ್ಲ. ಬದಲಿಗೆ ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದಕ್ಕಾಗಿ ಶೀಘ್ರದಲ್ಲೇ ಮನೆಮನೆಗೆ ಅರ್ಜಿ ಫಾರಂಗಳನ್ನು ವಿತರಿಸಲಾಗುವುದು, ಆ ಫಾರಂ ನೀಡಿದಾಗ ಜನರಿಗೆ ಯೋಜನೆಯ ಮಾನದಂಡಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದು ಅವರು ಹೇಳಿದರು.
ಇದು ಯೋಜನೆಯ ಕಡಿತ ಅಥವಾ ಹೊಸ ಪರಿಷ್ಕರಣೆಯಲ್ಲ, ಬದಲಿಗೆ ಅರ್ಹರಿದ್ದವರಿಗೆಲ್ಲಾ ಸೌಲಭ್ಯ ಸಿಗುವಂತೆ ಮಾಡುವುದು ಮತ್ತು ಅನರ್ಹರಿಗೆ ಇದು ಸಿಗದಂತೆ ತಡೆಯುವ ಪ್ರಕ್ರಿಯೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
‎ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 64 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಕೇವಲ ನಿಜವಾದ ಅರ್ಹರನ್ನು ಗುರುತಿಸುವ ಉದ್ದೇಶದಿಂದ ಮಾತ್ರವೇ ಈಗ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಅರ್ಜಿ ಫಾರಂನಲ್ಲಿ ಜಾತಿ ವಿವರಗಳನ್ನು ಕೇಳುವ ಕುರಿತು ಎದ್ದಿರುವ ಚರ್ಚೆಗೆ ನೇರವಾಗಿ ಉತ್ತರಿಸಿದ ಸಚಿವ ಕೆ.ಜೆ. ಜಾರ್ಜ್, ಅರ್ಜಿಗಳಲ್ಲಿ ಜಾತಿ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಪಾದಿಸಿದರು. ಇದು  ಕೇವಲ ಮಾಹಿತಿ ಸಂಗ್ರಹದ ಉದ್ದೇಶಕ್ಕಷ್ಟೇ ಸೀಮಿತವಾಗಿದ್ದು, ಬೇರೇನೂ ಇಲ್ಲ. ಅರ್ಹತೆ ಇರುವ ಪ್ರತಿಯೊಬ್ಬರಿಗೂ ಯಾವುದೇ ತಾರತಮ್ಯವಿಲ್ಲದೆ ಯೋಜನೆಯ ಲಾಭ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

About Author

Leave a Reply

Your email address will not be published. Required fields are marked *

You may have missed