ಶಾಸಕ ಟಿ.ಡಿ ರಾಜೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ…
1 min read
ಶಾಸಕ ಟಿ.ಡಿ ರಾಜೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಗೆ ಅಭಿನಂದನೆಯನ್ನು ಸಲ್ಲಿಸಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರಿಗೆ ಸಚಿವ ಸ್ಥಾನವನ್ನು ನೀಡಿದರೆ ಸಮುದಾಯದ ಬೆಳವಣಿಗೆ ಜೊತೆಗೆ ಬೆಳವಣಿಗೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ
ಟಿ.ಡಿ ರಾಜೇಗೌಡರು 1995 ರಲ್ಲಿ ರಾಜಕೀಯದ ಮೂಲಕ ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶ ಮಾಡಿ 1996 ರಿಂದ 2001 ರ ವರೆಗೆ ಖಾಂಡ್ಯ ಕ್ಷೇತ್ರ ಮತ್ತು 2001 ರಿಂದ 2006 ರ ವರೆಗೆ ವಸ್ತಾರೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಮತ್ತು 2002 ರಿಂದ 2004ರ ವರೆಗೆ ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.
2018 ಮತ್ತು 2023 ರ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಲೆನಾಡು ಪ್ರದೇಶಾಭಿವೃದ್ಧಿ ಶಿವಮೊಗ್ಗ ಇದರ ಅಧ್ಯಕ್ಷರಾಗಿ ಇಲ್ಲಿಯವರೆಗೆ ಉತ್ತಮ ಆಡಳಿತ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ತಂದಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಕರ್ನಾಟಕ ನವೀಕ-ರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ, ಬೆಂಗಳೂರು ಇದರೆ ಅಧ್ಯಕ್ಷರಾಗಿದ್ದು, ಸಿಎಸ್‌ಆರ್ ನಿಧಿಯಿಂದ ಹಲವಾರು ಸಂಘ ಸಂಸ್ಥೆಗಳಿಗೆ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸಿರುತ್ತಾರೆ ಎಂದರು.
ಧಾರ್ಮಿಕ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಿಗೆ ಸಹಾಯ ಕೋರಿ ಬಂದವ ರಿಗೆ ಕೈಲಾದ ಧನ ಸಹಾಯ ಮಾಡಿ ಪ್ರೋತ್ಸಾಹಿಸಿರುತ್ತಾರೆ. ಶ್ರೀಯುತರ ಮಗಳ ಹೆಸರಿನಲ್ಲಿ “ಸೃಜನ ಟ್ರಸ್ಟ್” ಸ್ಥಾಪಿಸಿ ಕ್ಷೇತ್ರಾದ್ಯಂತ ಹಲವಾರು ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಮತ್ತು ಬಯಲು ಪ್ರದೇಶವನ್ನು ಒಳಗೊಂಡಿದ್ದು ಪ್ರಾದೇಶಿಕ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ ವಿಶೇಷವಾಗಿ ಸರ್ಕಾರಿ ಅರಣ್ಯ ಜವಿ ಒತ್ತುವರಿ ಸಮಸ್ಯೆ, ಕಾಡನೆಗಳಿಂದ ರೈತ-ತೊಂದರೆಯಾಗುತ್ತಿರುವುದನ್ನು ಬಲ್ಲವರಾಗಿದ್ದು, ಸ್ವತ: ಕಾಫಿ ಬೆಳೆಗಾರರಾಗಿ ಕಾಫಿ ಬೆಳೆಗಾರರ ಸಮಸ್ಯೆಯನ್ನು ಅರಿತಿ-ದ್ದಾರೆ ಎಂದರು.
ಚಿಕ್ಕಮಗಳೂರು ಜಿಲ್ಲೆಗೆ ನೀಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗಿಯು ನೇಮಕವಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಇದರಿಂದಾಗಿ ಜಿಲ್ಲೆಯ ಮಲೆನಾಡು ಭಾಗ ಹಾಗೂ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಜನ ಪ್ರತಿನಿಧಿಗಳು ದೊರೆತಂತಾಗುತ್ತದೆ ಹಾಗಾಗಿ ಜನ ನಾಯಕರಾಗಿ ಜನಮನ ಗೆದ್ದಿರುವ ಚಿಂತನಶೀಲ, ಕ್ರೀಯಶೀಲ ವ್ಯಕ್ತಿಯಾದ ಟಿ.ಡಿ ರಾಜೇಗೌಡರಿಗೆ ತಮ್ಮ ಸಚಿವ ಸಂಪುಟದಲ್ಲಿ ಸ್ಥಾನ ಕೊಟ್ಟು ಜಿಲ್ಲಾ ಉಸ್ತುವಾರಿಸಚಿವರನ್ನಾಗಿ ನೇಮಕ ಮಾಡಬೇಕಾಗಿ ಸಂಘದ ಪರವಾಗಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಟಿ.ಡಿ ಮಲ್ಲೇಶ್, ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮುಖ್ಯಮಂತ್ರಿಗಳಲ್ಲಿ ವಿನಂತಿಸಿದ್ದಾರೆ.

