लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಆಲ್ದೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಜಾನಪದ ಅರಿವು ಉಳಿವು ಸಾಂಸ್ಕೃತಿಕ ಕಾರ್ಯಕ್ರಮ

1 min read

ಆಲ್ದೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಜಾನಪದ ಅರಿವು ಉಳಿವು ಸಾಂಸ್ಕೃತಿಕ ಕಾರ್ಯಕ್ರಮ

ಆಲ್ದೂರು: ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ವತಿಯಿಂದ ಸೋಮವಾರ ಚಿಕ್ಕಮಗಳೂರಿನಲ್ಲಿರುವ ಆಲ್ದೂರು ಡಾಕ್ಟರ್ ಬಿ ಆರ್, ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಜಾನಪದ ಅರಿವು ಉಳಿವು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಕ್ಕಳ ತಜ್ಞ ಕಜಾಪ ಗೌರವಾಧ್ಯಕ್ಷ ಡಾಕ್ಟರ್ ಜೆಪಿ ಕೃಷ್ಣೇಗೌಡ, ಜಾನಪದ ಕಲೆಯ ಸೊಗಡಿನ ವೈಭವ ಮತ್ತು ಹಿನ್ನೆಲೆಯ ಕುರಿತು ತಿಳಿಸಿ ಉತ್ತಮ ಆರೋಗ್ಯಕ್ಕೆ ಅನುಸರಿಸಬೇಕಾದ ಸೂತ್ರಗಳ ಮಾಹಿತಿ ತಿಳಿಸಿದರು.
ಬಳಿಕ ಸಾಮಾಜಿಕ ಪ್ರಜ್ಞೆ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ತಮ್ಮ ಉಸ್ತುವಾರಿಯಲ್ಲಿರುವ ಅಂಧ ಮಕ್ಕಳ ಆಶ್ರಮಕ್ಕೆ ಉಚಿತ ಬಸ್ ಸೌಲಭ್ಯವನ್ನು ಕಲ್ಪಿಸಿ ಭೇಟಿ ನೀಡಲು ಅವಕಾಶ ಕಲ್ಪಿಸಲಾಗುವುದು ರಾಷ್ಟ್ರಕವಿ ಕುವೆಂಪು ಜನ್ಮಸ್ಥಳವಾದ ಕುಪ್ಪಳ್ಳಿಗೆ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಉಚಿತ ಬಸ್ ಹಾಗೂ ಸೌಲಭ್ಯಗಳನ್ನು ನೀಡಿ ಪ್ರವಾಸಕ್ಕೆ ಕರೆದೊಯ್ಯಲಾಗುವುದು ಎಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಸತಿ ಶಾಲೆಯ ಪ್ರಾಂಶುಪಾಲ ಪಿ ಆರ್ ಮಧುಸೂದನ್, ಜಾನಪದ ಸಾಹಿತ್ಯ ಕನ್ನಡ ಸಾಹಿತ್ಯದ ಮೂಲಭೇರಾಗಿದ್ದು ಅದರ ಆಳ ಅರಿವನ್ನು ವಿದ್ಯಾರ್ಥಿ ದೆಸೆಯಿಂದಲೇ ಅಧ್ಯಯನ ಮಾಡಿದಾಗ ಮಾತ್ರ ಮುಂದಿನ ಪೀಳಿಗೆಗೆ ಭವ್ಯ ಜಾನಪದ ಸಾಂಸ್ಕೃತಿಕ ಪರಂಪರೆಯ ಕುರಿತು ತಿಳಿಸಬಹುದು ಅದನ್ನು ಉಳಿಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳಿಂದ ಜಾನಪದ ಸಾಂಸ್ಕೃತಿಕ ನೃತ್ಯ ಕಲಾ ಪ್ರದರ್ಶನ ನಡೆಯಿತು. ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು ಸದಸ್ಯರು ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗದವರು ಹಾಜರಿದ್ದರು.

About Author

Leave a Reply

Your email address will not be published. Required fields are marked *

You may have missed