AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕಮಗಳೂರು : ಜಿಲ್ಲೆಯ,ಮಲೆನಾಡಿನ ಕಾಡಂಚಿನ ಗ್ರಾಮದಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ.

‎ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ವಲಯದ ಬಿಳಗಲಿ ಗ್ರಾಮದ ಬಳಿ ಕಾಡುಕೋಣವೊಂದು ನಡೆಸಿದ ದಾಳಿಗೆ ಶೀಲಾ (52) ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.

‎ನಿತ್ಯದಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಎದುರಾದ ಕಾಡುಕೋಣ ಇವರ ಮೇಲೆರಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ತೋಟದಲ್ಲಿ ಶೀಲಾ ಅವರು ಕೆಲಸದಲ್ಲಿ ಮಗ್ನರಾಗಿದ್ದಾಗ ಏಕಾಏಕಿ ಬಂದ ಕಾಡುಕೋಣ ಅತಿ ಕ್ರೂರವಾಗಿ ದಾಳಿ ನಡೆಸಿದೆ.

‎ಕೋಣದ ಕೊಂಬುಗಳು ಮಹಿಳೆಯ ಕುತ್ತಿಗೆ ಮತ್ತು ಹೊಟ್ಟೆಯ ಭಾಗಕ್ಕೆ ಬಲವಾಗಿ ಚುಚ್ಚಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿಯ ರಭಸಕ್ಕೆ ದೇಹದಿಂದ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಉಂಟಾಗಿದೆ.

ಸಾಂದರ್ಭಿಕ ಚಿತ್ರಗಳು.

‎ಇದನ್ನು ಗಮನಿಸಿದ ತೋಟದ ಇತರ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣವೇ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ, ಗಾಯಗಳ ತೀವ್ರತೆ ಹೆಚ್ಚಾಗಿದ್ದ ರಿಂದ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

‎‎ಈ ಘಟನೆಯು ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ಮತ್ತು ಆತಂಕವನ್ನು ಸೃಷ್ಟಿಸಿದೆ. ಕಾಡಂಚಿನ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ.

ಸಾಂದರ್ಭಿಕ ಚಿತ್ರಗಳು.

ಸದ್ಯ ಈ ದಾರುಣ ಘಟನೆಗೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ..

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ಬ್ಯೂರೋ ನ್ಯೂಸ್,ಅವಿನ್ ಟಿವಿ.

About Author

Leave a Reply

Your email address will not be published. Required fields are marked *