“ಅಂಬೇಡ್ಕರ್ ವಸತಿ ಶಾಲೆಯಲ್ಲಿ ಅವ್ಯವಸ್ಥೆ ಆರೋಪ : ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ”
1 min read
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ನರಿಗುಂಡನಹಳ್ಳಿ ಸರ್ಕಲ್ ಸಮೀಪ ಇರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅರೆಬಂದ ಹಾಗೂ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿನಾಂಕ 20/07/2026ರ ಸೋಮವಾರ ಪ್ರತಿಭಟನೆ ನಡೆಸಿದರು.
6ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಸುಮಾರು 190ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಆರೋಪದ ಪ್ರಕಾರ,ಹಲವು ದಿನಗಳಿಂದ ಅರೆಬೆಂದ ಚಿಕನ್ ಸೇರಿದಂತೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಇದರಿಂದ ಅನೇಕ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ.
ಈ ಬಗ್ಗೆ ಹಲವು ಬಾರಿ ವಾರ್ಡನ್ ಸೇವಾ ಅವರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಇದೇ ವೇಳೆ,ಸರ್ಕಾರದಿಂದ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಒದಗಿಸಲಾಗುವ ಸಾಮಗ್ರಿಗಳು ಹಾಗೂ ಇತರೇ ಪರಿಕರಗಳ ದುರ್ಬಳಕೆ ನಡೆಯುತ್ತಿದೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ. ಸರ್ಕಾರದಿಂದ ಶೈಕ್ಷಣಿಕ ಪ್ರವಾಸಕ್ಕಾಗಿ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆಯಾಗಿದ್ದರೂ,ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯದೆ ನಿಲಕ್ಷ್ಯ ವಹಿಸಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಕೆಲಕಾಲ ಶಾಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಂಬಂಧಪಟ್ಟ ಇಲಾಖೆ ಸಮಗ್ರ ತನಿಖೆ ನಡೆಸಿ ತಪ್ಪಿಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

